
ಕಡತ
(ಸಾಂದರ್ಭಿಕ ಚಿತ್ರ)
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2026ರ ಫೆಬ್ರವರಿ 15 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಸೇವಾ ಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ಉಚಿತ ಸೇವೆ ಪಡೆಯಲು ಬೆಂಗಳೂರು ದಕ್ಷಿಣ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ ಅಥವಾ ಜಿಲ್ಲಾ ಮಾಹಿತಿ ಕೇಂದ್ರ ರಾಮನಗರ, ಮೊ: 9880297132, ತಾಲ್ಲೂಕು ಮಾಹಿತಿ ಕೇಂದ್ರ, ಚನ್ನಪಟ್ಟಣ, ಮೊ: 7795757850, ತಾಲ್ಲೂಕು ಮಾಹಿತಿ ಕೇಂದ್ರ, ಕನಕಪುರ ಮೊ: 9880297132 ಅಥವಾ ತಾಲ್ಲೂಕು ಮಾಹಿತಿ ಕೇಂದ್ರ, ಮಾಗಡಿ ಮೊ: 7204892366 ಸಂಪರ್ಕಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.