ಕನಕಪುರ: ತಾಲ್ಲೂಕಿನಲ್ಲಿ ಸೋಮವಾರ ರಾತ್ರಿ ಸಾಧಾರಣ ಮಳೆಯಾಗಿದೆ.
ಇಡೀ ರಾತ್ರಿ ಸಣ್ಣ ಪ್ರಮಾಣದಲ್ಲಿ ಭೂಮಿಗೆ ಹದವಾದ ಮಳೆಯಾಗಿದೆ. ಇನ್ನೆರಡು ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ ರೈತರು ಉಳುಮೆ ಕೆಲಸ ಮಾಡಲು ಅನುಕೂಲವಾಗಲಿದೆ.
ತಾಲ್ಲೂಕಿನ ಕೋಡಿಹಳ್ಳಿ ಭಾಗದಲ್ಲಿ ಹೆಚ್ಚಿನಪ್ರಮಾಣದಲ್ಲಿ ಮಳೆಯಾಗಿದ್ದು, ಕಸಬಾ, ಸಾತನೂರು ಮತ್ತು ಉಯ್ಯಂಬಳ್ಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಬಿಸಿಲಿನ ತಾಪದಿಂದ ಒಣಗುತ್ತಿದ್ದ ತೆಂಗು, ಮಾವು ಮತ್ತು ರೇಷ್ಮೆ ತೋಟಗಳು ಮಳೆಯಿಂದಾಗಿ ತುಸು ಚೇತರಿಸಿಕೊಳ್ಳುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.