ಕನಕಪುರ: ನೀತಿ ಸಂಹಿತೆ ಜಾರಿಯಾದರೂ ಅಭ್ಯರ್ಥಿಗಳ ಪರ ಪ್ರಚಾರದ ಗೋಡೆ ಬರಹಗಳು ರಾರಾಜಿಸುತ್ತಿವೆ. ದೂರು ನೀಡಿದರೂ ಚುನಾವನಾ ಆಯೋಗ ಕ್ರಮ ಕೈಗೊಳ್ಳುತ್ತಿಲ್ಲ. ಇಲ್ಲಿ ಪಾರದರ್ಶಕ ಚುನಾವಣೆ ಮಾಡಲು ಆಯೋಗ ಮುಂದಾಗುತ್ತಿಲ್ಲ ಎಂದು ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನಗೌಡ ಆರೋಪಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಕಪುರ ತಾಲ್ಲೂಕಿನಲ್ಲಿ ಕೇವಲ ಹೆಸರಿಗೆ ಮಾತ್ರ ನೀತಿ ಸಂಹಿತೆ ಜಾರಿಯಲ್ಲಿದೆ ಎಂದು ದೂರಿದರು.
ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿರುವ ಅಭ್ಯರ್ಥಿಗಳ ಪರ ಪ್ರಚಾರದ ಗೋಡೆ ಬರಹಗಳು ರಾರಾಜಿಸುತ್ತಿವೆ. ಅವುಗಳನ್ನು ತೆರವುಗೊಳಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದರು.
ಚುನಾವಣೆ ಸಂಬಂಧ ನಡೆಯುವ ಅಕ್ರಮದ ಬಗ್ಗೆ ದೂರು ಸಲ್ಲಿಸುವ ವ್ಯಕ್ತಿಗಳ ಮಾಹಿತಿ ಗುಪ್ತವಾಗಿ ಇಡಬೇಕು. ಆದರೆ, ರಾಮನಗರ ಜಿಲ್ಲೆ ಚುನಾವಣಾ ಅಧಿಕಾರಿಗಳು ದೂರುದಾರರ ಮಾಹಿತಿಯನ್ನು ಗೌಪ್ಯವಾಗಿಡದೆ ಬಹಿರಂಗಪಡಿಸಿ ದೂರುದಾರರಿಗೆ ತೊಂದರೆ ಆಗುವಂತೆ ಮಾಡುತ್ತಿದ್ದಾರೆ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.