
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಕನಕಪುರ: ತಾಲೂಕಿನ ಸೋಮೆಂದ್ಯಾಪನಹಳ್ಳಿಯಲ್ಲಿ ಸೋಮವಾರ ಹಸುವೊಂದು ನಾಡಬಾಂಬ್ ಸೇವಿಸಿದ್ದರಿಂದ ಅದರ ಬಾಯಿ ಛಿದ್ರಗೊಂಡಿದೆ.
ರೈತ ಕಾಳಲಿಂಗೇಗೌಡ ಅವರ ಹಸುವಿಗೆ ಗಂಭೀರ ಗಾಯವಾಗಿದೆ ಮತ್ತು ಅದು ಗರ್ಭಿಣಿಯಾಗಿತ್ತು ಎಂದು ಪಶು ವೈದ್ಯರು ತಿಳಿಸಿದ್ದಾರೆ. ಹಸು ಮತ್ತು ಅದರ ಕರು ಎರಡನ್ನೂ ಉಳಿಸಲು ಸಾಧ್ಯವಿಲ್ಲ ಎನ್ನಲಾಗಿದೆ. ಕಾಡು ಹಂದಿ ಬೇಟೆಗಾಗಿ ಜಮೀನಿನಲ್ಲಿ ಇಡಲಾಗಿದ್ದ ಬಾಂಬ್ ಈ ಘಟನೆಗೆ ಕಾರಣ ಎನ್ನಲಾಗಿದೆ.
ಕುಟುಂಬದ ಸದಸ್ಯರು ಪೊಲೀಸರಿಗೆ ದೂರು ನೀಡಿ, ಆರೋಪಿಗಳನ್ನು ಪತ್ತೆಹಚ್ಚಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಲ್ಲೂಕಿನಲ್ಲಿ ಇದೇ ರೀತಿ ಘಟನೆಗಳು ಪದೇ ಪದೇ ನಡೆಯುತ್ತಿರುವುದಕ್ಕೆ ಪೊಲೀಸರು ಗಂಭೀರ ಕ್ರಮ ಕೈಗೊಳ್ಳದಿರುವುದೇ ಕಾರಣ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.