ಅಪಘಾತ
–ಪ್ರಾತಿನಿಧಿಕ ಚಿತ್ರ
ಕನಕಪುರ: ಕಲ್ಲು ದಿಮ್ಮಿ ತುಂಬಿದ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ವಾಹನ ಸವಾರ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೇಕುಪ್ಪೆ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಬೈಕ್ ಸವಾರ ತಾಲ್ಲೂಕಿನ ನಲ್ಲಹಳ್ಳಿಯ ಚಿಕ್ಕ ಲಕ್ಷ್ಮೇಗೌಡ ಅವರಿಗೆ ಅಪಘಾತದಲ್ಲಿ ಸೊಂಟಕ್ಕೆ ಪೆಟ್ಟಾಗಿದ್ದು, ದಯಾನಂದ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕ್ಕ ಲಕ್ಷ್ಮೇಗೌಡ ಅವರು ತಮ್ಮ ಬೈಕ್‌ನಲ್ಲಿ ಭಾನುವಾರ ಸಂಜೆ ಕನಕಪುರಕ್ಕೆ ಬಂದು ವಾಪಸ್ ನಲ್ಲಹಳ್ಳಿಗೆ ಹೋಗುವಾಗ ಬೇಕುಪ್ಪೆ ಗ್ರಾಮದ ಬಳಿ ಕೋಡಿಹಳ್ಳಿ ಕಡೆಯಿಂದ ಕಲ್ಲು ದಿಮ್ಮಿ ತುಂಬಿಕೊಂಡು ಬರುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಲಾರಿ ಚಕ್ರಕ್ಕೆ ಸಿಲುಕಿ ಸಂಪೂರ್ಣ ಜಖಂಗೊಂಡಿದೆ.
ಅಪಘಾತದ ಬಗ್ಗೆ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ನಲ್ಲಹಳ್ಳಿ ಶ್ರೀನಿವಾಸ್ ಅವರು ಪೊಲೀಸರಿಗೆ ಮಾಹಿತಿ ನೀಡಿ, ಗಾಯಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಾಹಿತಿ ತಿಳಿದ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಪಘಾತದಲ್ಲಿ ಜಖಂಗೊಂಡಿದ್ದ ಬೈಕ್ ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.