ADVERTISEMENT

ಕನಕಪುರ ಚಲೋ: ಎಲ್ಲೆಡೆ ಖಾಕಿ ಕಣ್ಗಾವಲು, ಬಿಗಿ ಬಂದೋಬಸ್ತ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2020, 3:47 IST
Last Updated 13 ಜನವರಿ 2020, 3:47 IST
   

ರಾಮನಗರ: ಕನಕಪುರ ತಾಲ್ಲೂಕಿನ ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ವಿವಿಧ ಸಂಘಟನೆಗಳು ಸೋಮವಾರ ಕನಕಪುರ ಚಲೋ ಕಾರ್ಯಕ್ರಮ ಹಮ್ಮಿಕೊಂಡಿವೆ.

ಕನಕಪುರದ ಅಯ್ಯಪ್ಪಸ್ವಾಮಿ ದೇಗುಲದಿಂದ ಬೆಳಿಗ್ಗೆ 11ಕ್ಕೆ ಮೆರವಣಿಗೆ ಆರಂಭಗೊಳ್ಳಲಿದೆ. ಅಲ್ಲಿಂದ ಕನಕಪುರ ತಹಶೀಲ್ದಾರ್ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಕಲ್ಲಡ್ಕ ಪ್ರಭಾಕರ ಭಟ್ ಪ್ರತಿಭಟನೆ ಉದ್ದೇಶಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ‌.

ಮೆರವಣಿಗೆಯ ಹಿನ್ನೆಲೆಯಲ್ಲಿ ಪೊಲೀಸರು ಹೆಚ್ಚಿನ ಭದ್ರತೆ ಕಲ್ಪಿಸಿದ್ದಾರೆ. ರಾಮನಗರ ಎಸ್ಪಿ ಅನೂಪ್ ಶೆಟ್ಟಿ, ಒಬ್ಬರು ಎಎಸ್‌ಪಿ, ಮೂವರು ಡಿವೈಎಸ್ಪಿ, 14 ಸಿಪಿಐ ಜೊತೆಗೆ 700 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.

ADVERTISEMENT

ಇದಲ್ಲದೆ 4 ಕೆಎಸ್ ಆರ್ ಪಿ, 7 ಡಿಎಆರ್ ತುಕಡಿಗಳು ಈಗಾಗಲೇ ಕನಕಪುರದಲ್ಲಿ ಬೀಡು ಬಿಟ್ಟಿವೆ. 340 ಗೃಹ ರಕ್ಷಕರೂ ಕಾವಲು ಕಾಯಲಿದ್ದಾರೆ. ಸದ್ಯ ಕನಕಪುರದ ರಸ್ತೆಗಳಲ್ಲಿ ಜನರಿಗಿಂತಪೊಲೀಸರೇ ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸುತ್ತಿದ್ದಾರೆ.

ಮನವಿ: ಕನಕಪುರದಲ್ಲಿ ಕೆಲವು ಕೋಮುವಾದಿ ಶಕ್ತಿಗಳು ಕನಕಪುರ ಚಲೋ ಹೆಸರಿನಲ್ಲಿ ಶಾಂತಿ ಕದಡಲು ಯತ್ನಿಸುತ್ತಿವೆ. ಜನರು ಪ್ರಚೋದನೆಗೆ ಒಳಗಾಗದೇ ಶಾಂತಿ ಕಾಪಾಡಬೇಕು ಎಂದು ಕನಕಪುರ ಶಾಸಕ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.