ADVERTISEMENT

ಕನಕಪುರ: ಫೆ. 12ಕ್ಕೆ ಬಜೆಟ್ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 4:29 IST
Last Updated 10 ಫೆಬ್ರುವರಿ 2026, 4:29 IST
   

ಕನಕಪುರ (ರಾಮನಗರ): ಇಲ್ಲಿನ ನಗರಸಭೆಯ 2026-27ನೇ ಸಾಲಿನ ಬಜೆಟ್ ಸಿದ್ದಪಡಿಸುವ ಸಂಬಂಧ ಸಾರ್ವಜನಿಕರ ಪೂರ್ವಭಾವಿ ಸಭೆಯನ್ನು ಫೆ. 12ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಪೌರಾಯುಕ್ತರ ಅಧ್ಯಕ್ಷತೆಯಲ್ಲಿ ನಗರಸಭಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಭೆಗೆ ನಗರಸಭೆ ಹಾಲಿ ಮತ್ತು ಮಾಜಿ ಸದಸ್ಯರು, ಆಸಕ್ತ ಜನಪ್ರತಿನಿಧಿಗಳು, ಸಾರ್ವಜನಿಕರು, ಹಿರಿಯ ನಾಗರಿಕರು, ಸರ್ಕಾರೇತರ ಸಂಘ– ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ ಕನಕಪುರ ನಗರಸಭಾ ವ್ಯಾಪ್ತಿಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಲಹೆ, ಸೂಚನೆ ಹಾಗೂ ಮಾರ್ಗದರ್ಶನ ನೀಡಬೇಕು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT