ADVERTISEMENT

ಕನಕಪುರ: ಅಕ್ರಮ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಗೆ ದೂರು

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 3:02 IST
Last Updated 1 ಜನವರಿ 2026, 3:02 IST
ಕನಕಪುರ ತಾಲ್ಲೂಕಿನ ಕಬ್ಬಾಳು ಗ್ರಾಮದ ಸರ್ಕಾರಿ ಕಟ್ಟೆಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟುತ್ತಿರುವ ಕಟ್ಟಡ
ಕನಕಪುರ ತಾಲ್ಲೂಕಿನ ಕಬ್ಬಾಳು ಗ್ರಾಮದ ಸರ್ಕಾರಿ ಕಟ್ಟೆಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಕಟ್ಟುತ್ತಿರುವ ಕಟ್ಟಡ   

ಕನಕಪುರ: ತಾಲ್ಲೂಕಿನ ಕಬ್ಬಾಳು ಗ್ರಾಮದ ಕೆರೆಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡುತ್ತಿರುವ ಕಟ್ಟಡ ಕಾಮಗಾರಿಯನ್ನು ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ ಸ್ಥಗಿತಗೊಳಿಸುವಂತೆ ಮನವಿ ಮಾಡಿ ಸಾಮಾಜಿಕ ಹೋರಾಟಗಾರ ರವಿಕುಮಾರ್ ಕಂಚನಹಳ್ಳಿ ಅವರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಕಬ್ಬಾಳು ಗ್ರಾಮದ ಸರ್ವೆ ನಂಬರ್ 2 ರಲ್ಲಿ ಸರ್ಕಾರಿ ಕಟ್ಟೆ ಇದ್ದು ಅದನ್ನು ಮುಚ್ಚಿ ನಿರ್ಮಿತಿ ಕೇಂದ್ರದ ವತಿಯಿಂದ ಅಕ್ರಮವಾಗಿ ಶೌಚಾಲಯ ಮತ್ತು ವಾಣಿಜ್ಯ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಕೆರೆಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ತಡೆ ನೀಡಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ ಕೆರೆಯನ್ನು ಮೂಲ ಸ್ವರೂಪಕ್ಕೆ ತಂದು ಅಭಿವೃದ್ಧಿಪಡಿಸುವಂತೆ ಈಗಾಗಲೇ ದೂರು ಸಲ್ಲಿಸಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಅಕ್ರಮ ಕಟ್ಟಡ ನಿರ್ಮಾಣದ ಬಗ್ಗೆ ರಾಜ್ಯ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಆದರೂ ಕಟ್ಟಡ ಕಾಮಗಾರಿ ಮುಂದುವರೆಯುತ್ತಿದೆ. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ. ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೂ ಕಟ್ಟಡ ಕಾಮಗಾರಿ ಮಾಡದಂತೆ ಆದೇಶ ಮಾಡಬೇಕು ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿರುವ ದೂರಿನಲ್ಲಿ ಅವರು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.