ADVERTISEMENT

ಕಾಣೆಯಾದ ವ್ಯಕ್ತಿ ಶವವಾಗಿ ಪತ್ತೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 16:55 IST
Last Updated 8 ಜೂನ್ 2025, 16:55 IST
<div class="paragraphs"><p>ಸಾವು&nbsp;(ಪ್ರಾತಿನಿಧಿಕ ಚಿತ್ರ)</p></div>

ಸಾವು (ಪ್ರಾತಿನಿಧಿಕ ಚಿತ್ರ)

   

ಕನಕಪುರ: ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಕೂಲಿ ಕಾರ್ಮಿಕರೊಬ್ಬರು ಶನಿವಾರ ಬೆಟ್ಟಕೆರೆಯಲ್ಲಿ ಕೊಳೆತ ಶವವಾಗಿ ಪತ್ತೆಯಾಗಿದ್ದಾರೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕು ಮುತ್ತತ್ತಿ ಗ್ರಾಮದ ಮುತ್ತಯ್ಯ (60) ಮೃತರು.

ADVERTISEMENT

ಅಚ್ಚಲು ಗ್ರಾಮದಿಂದ ಹೊಂಗಾಣಿದೊಡ್ಡಿಗೆ ಹೋಗುವ ರಸ್ತೆಯಲ್ಲಿರುವ ಬೆಟ್ಟಕೆರೆಯಲ್ಲಿ ಮೃತರ ಶವ ಪತ್ತೆಯಾಗಿದೆ. ತಾಲ್ಲೂಕಿನ ಅಚ್ಚಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ದೊಡ್ಡಿ ಗ್ರಾಮದಲ್ಲಿ ತನ್ನ ಹೆಂಡತಿ ಮನೆಯಲ್ಲಿ ದಾಸಯ್ಯ ವಾಸವಿದ್ದರು. ಮದ್ಯ ವ್ಯಸನಿಯಾಗಿದ್ದ ದಾಸಯ್ಯ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು.

ಕೆರೆಯಲ್ಲಿ ಶವ ಕಂಡ ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಾತನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕೊಳೆತ ಸ್ಥಿತಿಯಲ್ಲಿದ್ದ ಶವವನ್ನು ಮೇಲೆತ್ತಿದ್ದಾರೆ.

ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಸಾತನೂರು ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ಪರೀಕ್ಷೆ ನಡಿಸಿ ಕುಟುಂಬದವರಿಗೆ ಹಸ್ತಾಂತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.