
ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಕನಕಪುರ: ಕೌಟುಂಬಿಕ ಕಲಹದಿಂದ ಮನದೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹದೇಶ್ವರ ಬಡಾವಣೆಯಲ್ಲಿ ಬುಧವಾರ ನಡೆದಿದೆ.
ನಗರದ ಮಹದೇಶ್ವರ ಬಡಾವಣೆಯ ಅನುಶ್ರೀ (35) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.
ಬೆಂಗಳೂರು ದಕ್ಷಿಣ ಜಿಲ್ಲೆ ತಾವರೆಕೆರೆ ಹೋಬಳಿಯ ಬ್ಯಾಲಾಳು ಗ್ರಾಮದ ಅನುಶ್ರೀ ಅವರು ಕನಕಪುರ ಮಹದೇಶ್ವರ ಬಡಾವಣೆಯ ಮಹೇಶ್ ಎಂಬವವರನ್ನು 15 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.
ಇತ್ತೀಚೆಗೆ ದಂಪತಿ ನಡುವೆ ಜಗಳ ನಡೆದಿತ್ತು. ಇದರಿಂದ ಮನನೊಂದ ಮಹಿಳೆ ಮನೆಯಲ್ಲೇ ಮಂಗಳವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಮಹಿಳೆಯನ್ನು ಸಾರ್ವಜನಿಕರ ಆಸ್ಪತ್ರೆಗೆ ಕರೆ ತಂದಿದ್ದಾರೆ. ಅಷ್ಟೊತ್ತಿಗೆ ಮಹಿಳೆ ಸಾವನ್ನಪ್ಪಿದ್ದಾರೆಂದು ವೈದ್ಯರು ಖಚಿತ ಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾವಿನ ಬಗ್ಗೆ ನಮಗೆ ಅನುಮಾನ ಇದೆ. ಸೂಕ್ತ ತನಿಖೆ ನಡೆಸಬೇಕೆಂದು ಅನುಶ್ರೀ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಂತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಹಸ್ತಾಂತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.