ರಾಮನಗರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಬೆಂಗಳೂರು ದಕ್ಷಿಣ ಜಿಲ್ಲೆಯ ಪ್ರವಾಸಿ ತಾಣಗಳ ಛಾಯಾಚಿತ್ರ ಹಾಗೂ ಒಂದು ನಿಮಿಷಕ್ಕೂ ಮೀರದಂತೆ (ಕನಿಷ್ಠ 30 ಸೆಕೆಂಡ್) ವಿಡಿಯೊ ಚಿತ್ರೀಕರಣ ಸ್ಪರ್ಧೆ ಆಯೋಜಿಸಲಾಗಿದೆ. ವಿಜೇತರಿಗೆ ಸೂಕ್ತ ಬಹುಮಾನ, ಪ್ರಶಂಸ ಪ್ರಮಾಣಪತ್ರಗಳನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ ಮೊ: 9535167637 ಸಂಪರ್ಕಿಸಬೇಕು ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.