ADVERTISEMENT

ಕನಕಪುರ: ಹಾವು ಕಚ್ಚಿ ರೈತ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2025, 3:05 IST
Last Updated 7 ಸೆಪ್ಟೆಂಬರ್ 2025, 3:05 IST
ಶೋಭಾ
ಶೋಭಾ   

ಕನಕಪುರ: ಸಾತನೂರು ಹೋಬಳಿ ಹಲಸೂರು ಗ್ರಾಮದಲ್ಲಿ ಶುಕ್ರವಾರ ಟೊಮೊಟೊ ಬಿಡಿಸುವಾಗ ರೈತ ಮಹಿಳೆಗೆ ವಿಷಪೂರಿತ ಹಾವು ಕಚ್ಚಿ ಮೃತಪಟ್ಟಿದ್ದಾರೆ.

ಹಲಸೂರು ಗ್ರಾಮದ ಶೋಭಾ (43) ಮೃತರು. ಶೋಭಾ ಅವರು ಶುಕ್ರವಾರ ಬೆಳಗ್ಗೆ ತಮ್ಮ ಜಮೀನಿನಲ್ಲಿ ಟೊಮೊಟೊ ಹಣ್ಣು ಬಿಡಿಸುವಾಗ ಹಾವು ಕಚ್ಚಿದೆ. ಕಚ್ಚಿದ 20 ನಿಮಿಷದಲ್ಲಿ ಶೋಭಾ ಅವರು ಪ್ರಜ್ಞಾ ಹೀನರಾದರು. ಅವರಿಗೆ ಸಾತನೂರು ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.