ADVERTISEMENT

ಕನಕಪುರ: ಉಚಿತ ಡ್ರೈವಿಂಗ್ ಲೈಸೆನ್ಸ್ ಕಾರ್ಡ್

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 2:36 IST
Last Updated 23 ಫೆಬ್ರುವರಿ 2026, 2:36 IST
ಕನಕಪುರ ಸಾತನೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ದುರ್ಗೇಗೌಡ ಡ್ರೈವಿಂಗ್ ಲೈಸೆನ್ಸ್ ನ ಕಾರ್ಡು ವಿತರಿಸಿದರು
ಕನಕಪುರ ಸಾತನೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ದುರ್ಗೇಗೌಡ ಡ್ರೈವಿಂಗ್ ಲೈಸೆನ್ಸ್ ನ ಕಾರ್ಡು ವಿತರಿಸಿದರು   

ಕನಕಪುರ: ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಉಚಿತವಾಗಿ ಮಾಡಿಕೊಟ್ಟ ಡ್ರೈವಿಂಗ್ ಲೈಸೆನ್ಸ್ ವಿತರಣೆ ಕಾರ್ಯಕ್ರಮ ಸಾತನೂರು ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆಯಿತು.

ಇಲಾಖೆ ವತಿಯಿಂದ ಸಾತನೂರು ಹೋಬಳಿ ವ್ಯಾಪ್ತಿಯಲ್ಲಿ ಡ್ರೈವಿಂಗ್ ಲೈಸೆನ್ಸ್ ಹೊಂದಿರದ 150 ಮಂದಿ ದ್ವಿಚಕ್ರ ವಾಹನ ಸವಾರರಿಗೆ ಉಚಿತವಾಗಿ ಡ್ರೈವಿಂಗ್ ಲೈಸೆನ್ಸ್ ಮಾಡಿಸಿಕೊಡಲಾಗಿತ್ತು.ಸಬ್ ಇನ್ಸ್ಪೆಕ್ಟರ್ ದುರ್ಗೆಗೌಡ ಡ್ರೈವಿಂಗ್ ಲೈಸೆನ್ಸ್ ಕಾರ್ಡ ವಿತರಣೆ ಮಾಡಿದರು.

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಡ್ರೈವಿಂಗ್ ಲೈಸೆನ್ಸ್, ವಾಹನದ ಇನ್ಸೂರೆನ್ಸ್ ಕಡ್ಡಾಯವಾಗಿ ಮಾಡಿಸಬೇಕು ಹಾಗೂ ವಾಹನಕ್ಕೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.