ಕನಕಪುರ: ಸ್ವಾತಂತ್ರ್ಯ ಹೋರಾಟಗಾರ, ವಿಎಸ್ಎಸ್ಎನ್ ನಿವೃತ್ತ ಕಾರ್ಯದರ್ಶಿ ಎಂ.ಎಸ್.ಕರಿಯಪ್ಪ ಶನಿವಾರ ಬೆಳಗ್ಗೆ ನಿಧನ ಹೊಂದಿದರು. ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ಬೂದಿಗುಪ್ಪೆ ಗ್ರಾಮದಲ್ಲಿ ಶನಿವಾರ ನೆರವೇರಿಸಲಾಯಿತು.
ಮೃತರಿಗೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಶಿವಕುಮಾರ್ ಸೇರಿದಂತೆ ಮೂವರು ಪುತ್ರಿಯರು ಇದ್ದಾರೆ.
ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯಿಂದ ಮೃತರಿಗೆ ರಾಷ್ಟ್ರ ಧ್ವಜ ಹೊದಿಸಿ ಸರ್ಕಾರದ ನಿಯಮದಂತೆ ಅಂತಿಮ ಗೌರವ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.