
ಪ್ರಜಾವಾಣಿ ವಾರ್ತೆ
ಕನಕಪುರ: ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ತಾವರಗಟ್ಟೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ತಾವರಗಟ್ಟೆದ ಶಿವಲಿಂಗೇಗೌಡ (28) ಮೃತರು. ಇವರಿಗೆ ವಿವಾಹವಾಗಿದ್ದು ಪತ್ನಿ ದೂರವಾಗಿರುವಾಗಿ ತಿಳಿದು ಬಂದಿದೆ.
ಮಂಗಳವಾರ ರಾತ್ರಿ ಶಿವಲಿಂಗೇಗೌಡ ಊಟ ಮಾಡಿ ಮಲಗಿದ್ದಾನೆ. ಬುಧವಾರ ಬೆಳಗ್ಗೆ ಶಿವಲಿಂಗೇಗೌಡ ಅವರ ತಂದೆ ರಮೇಶ್ ಎದ್ದು ನೋಡಿದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ರಮೇಶ್ ಸಾತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಕನಕಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ತಾವರಗಟ್ಟೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ಬುಧವಾರ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.