ADVERTISEMENT

ಕನಕಪುರ: ಚಿರತೆ ಸೆರೆಹಿಡಿದ ಅರಣ್ಯಾಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 7 ಮೇ 2020, 10:42 IST
Last Updated 7 ಮೇ 2020, 10:42 IST
ಸೆರೆಹಿಡಿದಿರುವ ಚಿರತೆ
ಸೆರೆಹಿಡಿದಿರುವ ಚಿರತೆ   

ಕನಕಪುರ: ಹಗಲಿನ ವೇಳೆಯಲ್ಲೇ ಕಾಣಿಸಿಕೊಂಡುಭಯ ಹುಟ್ಟಿಸುತ್ತಿದ್ದ ಚಿರತೆಯನ್ನುವಾಡೇದೊಡ್ಡಿ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ.

ವಾಡೆದೊಡ್ಡಿ ಗ್ರಾಮದಲ್ಲಿ ಚಿರತೆಯು ಬಹಳ ದಿನಗಳಿಂದ ಕಾಣಿಸಿಕೊಳ್ಳುತ್ತಿದ್ದು ಕೋಳಿ, ಕುರಿಗಳನ್ನು ಹೊತ್ತೊಯ್ದು ತಿನ್ನುತ್ತಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದಿನೇಶ್‌ ಮಾರ್ಗದರ್ಶನದಲ್ಲಿ ಅರಣ್ಯ ಅಧಿಕಾರಿಗಳ ತಂಡವು ಕಾರ್ಯಾಚರಣೆ ನಡೆಸಿ ಬಲೆಯಿಂದ ಚಿರತೆಯನ್ನು ಹಿಡಿದು ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.