ಕನಕಪುರ: ರಾಜಕುಮಾರ ಅವರಿಗೂ ಕನಕಪುರಕ್ಕೂ ಅವಿನಾಭಾವ ಸಂಬಂಧವಿದೆ. ಆ ನೆನಪಿಗಾಗಿ ನಗರಸಭೆಯಿಂದ ಇಲ್ಲಿನ ಯಾವುದಾದರೂ ಒಂದು ರಸ್ತೆಗೆ ಡಾ. ರಾಜಕುಮಾರ ಅವರ ಹೆಸರು ಇಡಬೇಕು ಎಂದು ಸ್ವತಂತ್ರ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕನ್ನಡ ಭಾಸ್ಕರ್ ಒತ್ತಾಯಿಸಿದರು.
ಶನಿವಾರ ಡಾ.ರಾಜಕುಮಾರ್ ಅವರ 19ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾತೃಶ್ರೀ ನಮನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನಮನ ಚಂದ್ರು ಮಾತನಾಡಿ, ರಾಜಕುಮಾರ ಅವರು ಕನ್ನಡ ಚಿತ್ರರಂಗದ ಅಭಿಷಕ್ತ ದೊರೆಯಾಗಿ ಮೆರೆದು ಹಲವಾರು ಪಾತ್ರಗಳಲ್ಲಿ ಅಭಿನಯಿಸಿ ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಐತಿಹಾಸಿಕ ಮತ್ತು ಸಾಮಾಜಿಕ ಪಾತ್ರಗಳಲ್ಲಿ ಅಭಿನಯಿಸಿ ಜನರಿಗೆ ಮಾದರಿಯಾಗಿದ್ದಾರೆ ಎಂದರು.
ವೇದಿಕೆಯ ತಾಲ್ಲೂಕು ಅಧ್ಯಕ್ಷ ಅಂಗಡಿ ರಮೇಶ್, ಜಿಲ್ಲಾ ಉಪಾಧ್ಯಕ್ಷ ಕೆ.ಸುರೇಶ್, ಮಾತೃಶ್ರೀ ನಮನ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ನಾಗೇಶ್, ಅಖಿಲೇಶ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.