ಕನಕಪುರ: ತಾಲ್ಲೂಕಿನ ಟಿ.ಬೇಕುಪ್ಪೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಚೌಕಸಂದ್ರದ ಶಾಂತಿಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿದ್ದ ಅರ್ಪಿತ ರಾಜೀನಾಮೆಯಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಿತು.ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶಾಂತಿಬಾಯಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರು. ಚುನಾವಣಾ ಅಧಿಕಾರಿಗಳು ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯ ಪಾಲಕ ಅಭಿಯಂತರ ಚಂದ್ರಶೇಖರ್, ಸಹಾಯಕ ಚುನಾವಣಾ ಅಧಿಕಾರಿಯಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಕೆಲಸ ನಿರ್ವಹಿಸಿದರು.
ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಕೆ.ಎನ್. ದಿಲೀಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜು, ಗ್ರಾಮ ಪಂಚಾಯಿತಿ ಸದಸ್ಯ ಹೊರಳಗಲ್ ರಮೇಶ್, ಜಗದೀಶ್ ನಾಯಕ್, ಉಮೇಶ್ ನಾಯಕ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.