ಕನಕಪುರ: ಸರ್ಕಾರದ ಹಲವು ಹಗರಣಗಳನ್ನು ಖಂಡಿಸಿ ನಗರದಲ್ಲಿ ಬಿಜೆಪಿ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದಾಗ ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ನಮ್ಮ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದು ಬೊಬ್ಬೆ ಹಾಕುತ್ತಿದ್ದರು. ಈಗ ಪೊಲೀಸರ ಮೂಲಕ ಹೋರಾಟಗಾರರನ್ನು ಬಂಧಿಸಿದ್ದಾರೆ ಎಂದು ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೆ.ಪಿ.ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಕೋಟೆ ಮಂಜುನಾಥ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋಟೆ ರಾಜೇಶ್ ಮಾತನಾಡಿ, ಹೋರಾಟ ನಡೆಸುವುದು ಪ್ರತಿಯೊಬ್ಬ ವ್ಯಕ್ತಿ ಹಕ್ಕು. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.