ADVERTISEMENT

ಕನಕಪುರ: ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಅಭಿಯಾನ

​ಪ್ರಜಾವಾಣಿ ವಾರ್ತೆ
Published 10 ಮೇ 2025, 13:04 IST
Last Updated 10 ಮೇ 2025, 13:04 IST
ಕನಕಪುರ ಆರ್ ಇ ಎಸ್ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಅಭಿಯಾನಕ್ಕೆ ಕೆ ಹರೀಶ್ ಸದಸ್ಯತ್ವವನ್ನು ಪಡೆದುಕೊಂಡು ನೋಂದಣಿ ಶುಲ್ಕ ನೀಡಿದರು
ಕನಕಪುರ ಆರ್ ಇ ಎಸ್ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಅಭಿಯಾನಕ್ಕೆ ಕೆ ಹರೀಶ್ ಸದಸ್ಯತ್ವವನ್ನು ಪಡೆದುಕೊಂಡು ನೋಂದಣಿ ಶುಲ್ಕ ನೀಡಿದರು   

ಕನಕಪುರ: ಇಲ್ಲಿನ ರೂರಲ್ ಎಜುಕೇಷನ್ ಸೊಸೈಟಿ ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯತ್ವ ಅಭಿಯಾನ ಶುಕ್ರವಾರ ಸೊಸೈಟಿ ಕಚೇರಿಯಲ್ಲಿ ನಡೆಯಿತು.

ಡಿಸಿಎಂ ಡಿ.ಕೆ.ಶಿವಕುಮಾರ್ ಕಚೇರಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೆ.ಹರೀಶ್ ಗೌಡ, ನೂರು ಮಂದಿ ಹಿರಿಯ ವಿದ್ಯಾರ್ಥಿಗಳನ್ನು ನೋಂದಾಯಿಸಿ ಸದಸ್ಯತ್ವ ಶುಲ್ಕ ₹95 ಸಾವಿರವನ್ನು ಅಧ್ಯಕ್ಷ ಎಚ್.ಕೆ.ಶ್ರೀಕಂಠ ಅವರಿಗೆ ನೀಡಿದರು.

ಸದಸ್ಯತ್ವ ಶುಲ್ಕವನ್ನು ಸ್ವೀಕರಿಸಿದ ಅಧ್ಯಕ್ಷ ಎಚ್.ಕೆ.ಶ್ರೀಕಂಠ ಮಾತನಾಡಿ, ಈ ಸಂಸ್ಥೆಯಲ್ಲಿ ಓದಿದ ಎಲ್ಲ ಹಿರಿಯ ವಿದ್ಯಾರ್ಥಿಗಳು ಸಂಘದಲ್ಲಿ ನೋಂದಾಯಿಸಿಕೊಂಡು ಸಂಸ್ಥೆ ಅಭಿವೃದ್ಧಿಗೆ ಸಹಕರಿಸಬೇಕು ಮತ್ತು ಕೈಜೋಡಿಸಬೇಕೆಂದು ಮನವಿ ಮಾಡಿದರು.

ADVERTISEMENT

ಹಿರಿಯ ವಿದ್ಯಾರ್ಥಿಗಳ ಸಂಘದ ಸಂಚಾಲಕ ಡಾ.ಎಚ್.ಜಿ.ಪಾರ್ಥಸಾರಥಿ, ಪ್ರಾಂಶುಪಾಲ ಎಂ.ಟಿ.ಬಾಲಕೃಷ್ಣ, ಉಪ ಪ್ರಾಂಶುಪಾಲ ದೇವರಾಜು, ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.