ADVERTISEMENT

ಕನಕಪುರ: ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 2:48 IST
Last Updated 20 ಜುಲೈ 2025, 2:48 IST
ಕನಕಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪುನಃಶ್ಚೇತನ ಕಾರ್ಯಕ್ರಮದಲ್ಲಿ ಶ್ಯಾಮಲಾ ಮಾತನಾಡಿದರು
ಕನಕಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಪುನಃಶ್ಚೇತನ ಕಾರ್ಯಕ್ರಮದಲ್ಲಿ ಶ್ಯಾಮಲಾ ಮಾತನಾಡಿದರು   

ಕನಕಪುರ: ಕಾಲೇಜಿಗೆ ಹೊಸದಾಗಿ ದಾಖಲಾಗಿ ಬಂದ ವಿದ್ಯಾರ್ಥಿಗಳನ್ನು ಪುನಃಶ್ಚೇತನಗೊಳಿಸುವ ಕಾರ್ಯಕ್ರಮ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಬಿ.ಶ್ಯಾಮಲಾ ವಿದ್ಯಾರ್ಥಿಗಳನ್ನು ಕುರಿತು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಲೇಜು ಹಾಗೂ ಉಪನ್ಯಾಸಕರು ಶ್ರಮಿಸುತ್ತಿರುವುದಾಗಿ ತಿಳಿಸಿದರು.

ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಪ್ರತಿಯೊಬ್ಬರಿಗೂ ಉದ್ಯೋಗ ಸಿಗುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ADVERTISEMENT

ಕಾರ್ಯಕ್ರಮ ಮುಗಿದ ನಂತರ ಬಿ.ಎ, ಬಿ.ಕಾಂ, ಬಿಬಿಎ, ಬಿಸಿಎ, ಬಿಎಸ್ಸಿ ತರಗತಿ ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳನ್ನಾಗಿ ಮಾಡಿ ಹಲವು ಚಟುವಟಿಕೆ ನಡೆಸಲಾಯಿತು.

ವಿದ್ಯಾರ್ಥಿಗಳ ಮುಂದಿನ ಗುರಿ, ಹವ್ಯಾಸ, ಶಿಕ್ಷಣ ನೀತಿ ಬಗ್ಗೆ ಅನಿಸಿಕೆ ಮತ್ತು ಆದರ್ಶ ವ್ಯಕ್ತಿ ಹಾಗೂ ಹಲವು ವಿಷಯಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಾಯಿತು.

ಐಕ್ಯೂಎಸಿ ಸಂಚಾಲಕಿ ಅಕ್ಷತಾ ಪರಂಜ್ಯೋತಿ ಕುಮಾರ್ ಕಾರ್ಯಕ್ರಮ ಕುರಿತು ಮಾತನಾಡಿದರು.

ಕನ್ನಡ ವಿಭಾಗದ ಮುಖ್ಯಸ್ಥ ವಿಶ್ವರಾಧ್ಯ ಸ್ವಾಗತಿಸಿದರು. ನಿರ್ವಹಣಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಮುಜೀಬ್ ಖಾನ್ ಕಾಲೇಜಿನ ಸಂಪೂರ್ಣ ಮಾಹಿತಿ ತಿಳಿಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.