ಸಾಂದರ್ಭಿಕ-ಚಿತ್ರ
ಕನಕಪುರ: ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಕನಕಪುರ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಚುನಾವಣೆಯು ಇಲ್ಲಿನ ರೋಟರಿ ಭವನದಲ್ಲಿ ಶನಿವಾರ ನಡೆಯಿತು.
ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ಚುನಾವಣೆ ಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ.ಸಿ. ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೆ.ವಿ. ಮನು, ಉಪಾಧ್ಯಕ್ಷ ಸ್ಥಾನಕ್ಕೆ ರಾಜು ಎಚ್.ಪಿ, ಖಜಾಂಚಿ ಸ್ಥಾನಕ್ಕೆ ಕುಮಾರ್ ಸ್ಪರ್ಧೆ ಮಾಡಿದ್ದರು.
ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಚುನಾವಣಾ ಅಧಿಕಾರಿಗಳು ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆ ಘೋಷಿಸಿದರು. ಬೆಂಗಳೂರು ದಕ್ಷಿಣ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಲಿಂಗಯ್ಯ ವಿಭೂತಿಕೆರೆ, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್ ಮೇಲುಸ್ತುವಾರಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ಚುನಾವಣಾಧಿಕಾರಿಯಾಗಿ ಓದೇಶ ಸಕಲೇಶಪುರ, ಸಹಾಯಕ ಚುನಾವಣಾಧಿಕಾರಿಗಳಾಗಿ ಜಿಲ್ಲಾ ಘಟಕದ ಉಪಾಧ್ಯಕ್ಷ ಲಕ್ಷ್ಮಿಪತಿ ಮಂಗಳವಾರಪೇಟೆ ಮತ್ತು ಜಿಲ್ಲಾ ಕಾರ್ಯದರ್ಶಿ ಎಂ. ಜಗದೀಶ್ ಕರ್ತವ್ಯ ನಿರ್ವಹಿಸಿದರು.
ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿದರು. ಜಿಲ್ಲಾ ಉಪಾಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಿರೀಶ್, ಎಸ್. ಶ್ರೀಧರ್ ಹಾಗೂ ಕನಕಪುರ ತಾಲ್ಲೂಕು ಘಟಕದ ಸದಸ್ಯರಾದ ಬಾಬು ರಾವ್, ಎಂ.ಎನ್. ಸುರೇಶ್, ಕಾ.ಪ್ರಕಾಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.