
ಕನಕಪುರ: ಡಿಕೆಎಸ್ ಚಾರಿಟಬಲ್ ಟ್ರಸ್ಟ್‌ನಿಂದ ಐದು ದಿನಗಳಿಂದ ನಡೆಯುತ್ತಿರುವ ಜಿಲ್ಲಾ ಮಟ್ಟದ ಕನಕೋತ್ಸವಕ್ಕೆ ಭಾನುವಾರ ಅದ್ದೂರಿ ತೆರೆ ಬಿದ್ದಿತು.
ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಮನೋರಂಜನ ಕಾರ್ಯಕ್ರಮಗಳೊಂದಿಗೆ ಕನಕೋತ್ಸವ ಮುಕ್ತಾಯವಾಯಿತು. ಉತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆ ಆಯೋಜಿಸಲಾಗಿತ್ತು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧೆ ವಿಜೇತರಿಗೆ ಬಹುಮಾನ, ಟ್ರೋಫಿ ಮತ್ತು ಸರ್ಟಿಫಿಕೇಟ್ ವಿತರಿಸಿದರು.
ಚಿತ್ರ ನಟ, ನಟಿಯರು, ಹಾಸ್ಯ ಕಲಾವಿದರು, ಗಾಯಕರು, ನಿರೂಪಕರು, ರಿಯಾಲಿಟಿ ಶೋ ಸ್ಪರ್ಧಿಗಳು ಹಾಡು, ಕುಣಿದು ರಂಜಿಸಿದರು.
ಈ ಬಾರಿ ಎರಡು ಲಕ್ಷ ಮಂದಿ ಕನಕೋತ್ಸವ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಸ್ವೀಕರಿಸಿದ್ದಾರೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿದರು. ಈ ಬಾರಿ ಕಬ್ಬಾಳಮ್ಮ ದೇವಿಯನ್ನು ಅಂಬಾರಿಯಲ್ಲಿ ಮೆರವಣಿಗೆ ಮಾಡಲಾಯಿತು. 300 ಗ್ರಾಮ ದೇವತೆಗಳು ಒಂದೇ ಉತ್ಸವದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಪ್ರತಿದಿನ 50 ಸಾವಿರ ಕ್ಕೂ ಹೆಚ್ಚು ಜನರು ಕಾರ್ಯಕ್ರಮ ವೀಕ್ಷಿಸಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.