ADVERTISEMENT

ಅಕ್ರಮ ನೇಮಕಾತಿ ಆಗಿದ್ದರೆ ನಿಷ್ಪಕ್ಷಪಾತ ತನಿಖೆ: ಸಚಿವ ಸಿ.ಎನ್. ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 7:14 IST
Last Updated 28 ಏಪ್ರಿಲ್ 2022, 7:14 IST
ಸಿ.ಎನ್. ಅಶ್ವತ್ಥನಾರಾಯಣ
ಸಿ.ಎನ್. ಅಶ್ವತ್ಥನಾರಾಯಣ   

ರಾಮನಗರ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಚಾರದಲ್ಲಿ ಯಾವುದೇ ಅಕ್ರಮಗಳು ನಡೆದಿದ್ದರೂ ನಿಷ್ಪಕ್ಷಪಾತ ವಾಗಿ ತನಿಖೆ ನಡೆಸುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ನಗರದಲ್ಲಿ ಗುರುವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿದರು. ಪರೀಕ್ಷೆ ವಿಚಾರದಲ್ಲಿ ಒಂದೆರಡು ಸಂಗತಿಗಳು ಈಗಷ್ಟೇ ಬೆಳಕಿಗೆ ಬಂದಿವೆ. ನಾವು ಯಾವುದನ್ನೂ‌ ಮುಚ್ಚಿಟ್ಟಿಲ್ಲ. ಎಲ್ಲವನ್ನೂ ತನಿಖೆಗೆ ಒಳಪಡಿಸುತ್ತೇವೆ ಎಂದರು.

ನೇಮಕಾತಿ‌ ಅಕ್ರಮಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಸಂಸದ ಡಿ.ಕೆ. ಸುರೇಶ್ ಒತ್ತಾಯದ ಕುರಿತು ಪ್ರತಿಕ್ರಿಯಿಸಿ ' ಅವರ ಬಾಯಲ್ಲಿ ಇಂತಹ ವಿಚಾರ ಕೇಳಿದ್ದಕ್ಕೆ ಖುಷಿಯಾಗುತ್ತಿದೆ. ಭ್ರಷ್ಟಾಚಾರವನ್ನೇ ಹೊದ್ದು ಮಲಗಿದವರು ಈಗ ಎದ್ದು ನಿಂತಿದ್ದಾರೆ' ಎಂದು ಲೇವಡಿ ಮಾಡಿದರು.

ADVERTISEMENT

ಚನ್ನಪಟ್ಟಣ ತಹಶೀಲ್ದಾರ್ ವರ್ಗಾವಣೆ ವಿಚಾರದಲ್ಲಿ ಯಾವುದೇ ಗೊಂದಲ‌ ಆಗಿಲ್ಲ‌. ಕುಮಾರಸ್ವಾಮಿ ಕ್ಷೇತ್ರದ ಶಾಸಕರು. ಅವರ ಮಾತಿಗೂ ಬೆಲೆ ಕೊಡಬೇಕಾಗುತ್ತದೆ. ಹಾಗಂದ ಮಾತ್ರಕ್ಕೆ ಯಾರೊಂದಿಗೂ‌ ಹೊಂದಾಣಿಕೆಯ ಪ್ರಶ್ನೆ ಇಲ್ಲ ಎಂದು ಅಶ್ವತ್ಥನಾರಾಯಣ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.