ADVERTISEMENT

ಅಸ್ತಿತ್ವದ ಉಳಿವಿಗೆ ಆರ್‌ಎಸ್‌ಎಸ್ ವಿರುದ್ಧ ಸಿದ್ದರಾಮಯ್ಯ ಟೀಕೆ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 31 ಮೇ 2022, 5:48 IST
Last Updated 31 ಮೇ 2022, 5:48 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ರಾಮನಗರ: ಮಾಜಿ ಮುಖ್ಯಮಂತ್ರಿ‌ ಸಿದ್ದರಾಮಯ್ಯ ತಮ್ಮ ಅಸ್ತಿತ್ವ‌ ಉಳಿಸಿಕೊಳ್ಳಲು ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದರು‌.

ನಗರದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ‘ಆರ್‌ಎಸ್‌ಎಸ್‌ನಲ್ಲಿ ಒಂದು ಜಾತಿಯವರಷ್ಟೇ ಕೆಲಸ‌‌ ಮಾಡುತ್ತಿಲ್ಲ. ಎಲ್ಲರೂ ಇದ್ದಾರೆ. ನಾವೂ ಸಹಆರ್‌ಎಸ್‌ಎಸ್ ಭಾಗದವರೇ’ ಎಂದರು.

‘ಸಿದ್ದರಾಮಯ್ಯರಿಗೆ ಆರ್‌ಎಸ್‌ಎಸ್ ಬಗ್ಗೆ‌ ಮಾತನಾಡುವ ನೈತಿಕತೆ ಇಲ್ಲ. ಕಡು ಬಡತನದಿಂದ ಬಂದವರು ಪ್ರಾಮಾಣಿಕತೆ, ದಕ್ಷತೆ ಬಿಟ್ಟು ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದ್ದಾರೆ. ಅವರ ವಾಚ್, ಶೂ ಯಾವುದಕ್ಕಾದರೂ‌ ಲೆಕ್ಕ ಇದೆಯೇ’ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.