ADVERTISEMENT

ರಾಮನಗರ: ಭಾರಿ ಮಳೆ, ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2022, 11:48 IST
Last Updated 27 ಆಗಸ್ಟ್ 2022, 11:48 IST
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳು
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಾಲುಗಟ್ಟಿ ನಿಂತಿರುವ ವಾಹನಗಳು   

ರಾಮನಗರ: ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಿಂದಾಗಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಈ ಮಾರ್ಗದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಪೊಲೀಸರು ಸೂಚಿಸಿದ್ದಾರೆ.

ಕುಂಬಳಗೋಡು ಸಮೀಪ ಕೆರೆ ಕೋಡಿ ಬಿದ್ದು ರಸ್ತೆಗೆ ನೀರು ನುಗ್ಗಿದ್ದು, ಇದರಿಂದಾಗಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ರಾಮನಗರ ತಾಲ್ಲೂಕಿನ ಬಸವನಪುರ ಬಳಿ ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದು, ವಾಹನಗಳ ಮಾರ್ಗ ಬದಲಿಸಲಾಗಿದೆ. ಚನ್ನಪಟ್ಟಣದ ಅಲ್ಲಲ್ಲಿಯೂ ಸಂಚಾರಕ್ಕೆ ಅಡ್ಡಿಯಾಗಿದೆ.

ಪ್ರಯಾಣಿಕರು ಬೆಂಗಳೂರು- ಕನಕಪುರ- ಮೈಸೂರು ಇಲ್ಲವೇ ಬೆಂಗಳೂರು-ಕುಣಿಗಲ್- ಮೈಸೂರು ಮಾರ್ಗವಾಗಿ ಸಂಚರಿಸುವಂತೆ ರಾಮನಗರ ಪೊಲೀಸರು ಸಲಹೆ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.