ಮಾಗಡಿ: ಕೆಂಪೇಗೌಡರ ಕೋಟೆ ಉಳಿಸುವ ನಿಟ್ಟಿನಲ್ಲಿ ನಾನು ಹೋರಾಟ ನಿಲ್ಲಿಸುವುದಿಲ್ಲ. ಕೋಟೆ ಕಂದಕ ಮುಚ್ಚುತ್ತಿರುವುದು ಸರಿಯಲ್ಲ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ.ಕೃಷ್ಣಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಕೋಟೆ ಕಂದಕದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಚ್ಯ ವಸ್ತು ಇಲಾಖೆಗೆ ಸೇರಿರುವ ಕೋಟೆಯನ್ನು ನಾಶಪಡಿಸುತ್ತಿರುವ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಶೀಘ್ರ ಹೋರಾಟ ಮಾಡಲಾಗುವುದು. ಈ ಬಗ್ಗೆ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಕೆಂಪೇಗೌಡರ ಕೋಟೆ ಉಳಿಸುವ ನಿಟ್ಟಿನಲ್ಲಿ 21 ಇಲಾಖೆಗಳಿಗೆ ಮನವಿ ನೀಡಲಾಗಿದೆ ಎಂದರು.
ಈಗ ಕೋಟೆ ಕಂದಕದ ಬಳಿ ಕಟ್ಟಡ ಮಣ್ಣನ್ನು ಸುರಿದು ಕಂದಕ ಮುಚ್ಚುವ ಹುನ್ನಾರ ನಡೆಸುತ್ತಿದ್ದಾರೆ. ಹಾಗಾಗಿ ಕೋಟೆ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿ ಎಂದು ಮನವಿ ಮಾಡಿದರು.
ಈ ವೇಳೆ ಏಳಿಗೆಹಳ್ಳಿ ತಮ್ಮಣ್ಣಗೌಡ, ಪುಟ್ಟಸ್ವಾಮಿ, ದೊಡ್ಡಿ ಗೋಪಿ, ಮರೂರು ಶಂಕರಪ್ಪ, ಕೀರ್ತಿ, ಆನಂದ, ಸೈಯದ್, ರಾಮಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.