ಪ್ರಜಾವಾಣಿ ವಾರ್ತೆ
ಕನಕಪುರ: ಕಸಬಾ ಹೋಬಳಿ ಕಲ್ಲಹಳ್ಳಿ ಕೆರೆಯಲ್ಲಿ ಮಣ್ಣು ಲೂಟಿ ನಡೆಯುತ್ತಿದೆ. ಬೃಹತ್ ಯಂತ್ರಗಳ ಮೂಲಕ ಅಕ್ರಮವಾಗಿ ಸಾವಿರಾರು ಲೋಡ್ ಮಣ್ಣು ಸಾಗಿಸುತ್ತಿದ್ದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಬಡಾವಣೆ ನಿರ್ಮಾಣಕ್ಕೆ ಕೆರೆ ಮಣ್ಣು ತೆಗೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.