ADVERTISEMENT

ಪಾದಯಾತ್ರಿಗಳ ಮೇಲೆ ಪ್ರಕರಣ ದಾಖಲಿಸುವ ಯತ್ನ: ಡಿಕೆಶಿ ಆರೋಪ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 16:27 IST
Last Updated 9 ಜನವರಿ 2022, 16:27 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್    

ರಾಮನಗರ: ಬಿಜೆಪಿ ಹಾಗೂ ಜೆಡಿಎಸ್‌ ಇಬ್ಬರೂ ನಾಡದ್ರೋಹಿಗಳು. ಮೇಕೆದಾಟು ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಪಾದಯಾತ್ರೆಯನ್ನು ಹಿಂಪಡೆಯುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒತ್ತಡ ಹೇರುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿಯಲ್ಲಿ ಭಾನುವಾರ ರಾತ್ರಿ ಪತ್ರಕರ್ತರ ಜೊತೆ ಅವರು ಮಾತನಾಡಿದರು.

ಹೋರಾಟಗಾರರ ವಿರುದ್ಧ ಪ್ರಕರಣ ದಾಖಲಿಸುವ ಪ್ರಯತ್ನವನ್ನು ಖುದ್ದು ಮುಖ್ಯಮಂತ್ರಿ ಬಸವರಾಜ ಬಸವರಾಜ ಬೊಮ್ಮಾಯಿ ಅವರೇ ಮಾಡುತ್ತಿದ್ದಾರೆ. ನಾನು ತಿಹಾರ್ ಜೈಲಿಗೆ ಹೋದಾಗ ಗಡ್ಡ ಬಿಟ್ಟಿದ್ದೆ. ಈಗ ಜೈಲಿಗೆ ಹಾಕಿದರೂ ನಾನು ಇದೇ ಗಡ್ಡದೊಂದಿಗೆ ಹೋಗುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.