ADVERTISEMENT

ರಾಮನಗರ | ಕೆಪಿಎಸ್ ಶಾಲೆ ನಿರ್ಮಾಣಕ್ಕೆ ಕ್ರಮ: ಶಾಸಕ ಎಚ್.ಎ. ಇಕ್ಬಾಲ್ ಹುಸೇನ್

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 2:27 IST
Last Updated 28 ಸೆಪ್ಟೆಂಬರ್ 2025, 2:27 IST
<div class="paragraphs"><p>ರಾಮನಗರ ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿಯ ಸಭಾಭವನದ ಕಟ್ಟಡವನ್ನು&nbsp;ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಉದ್ಘಾಟಿಸಿದರು. </p></div>

ರಾಮನಗರ ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿಯ ಸಭಾಭವನದ ಕಟ್ಟಡವನ್ನು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಉದ್ಘಾಟಿಸಿದರು.

   

ರಾಮನಗರ: ‘ಮಾಯಗಾನಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ನನ್ನ ಅನುದಾನದಲ್ಲಿ ಸುಮಾರು ₹13 ಕೋಟಿ ವೆಚ್ಚದಲ್ಲಿ ಹಲವು ಶಾಶ್ವತ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಸ್ಥಳೀಯರ ಬೇಡಿಕೆಯಂತೆ, ಗ್ರಾಮದಲ್ಲಿ ಹೈಟೆಕ್ ಕೆಪಿಎಸ್‌ಸಿ ಶಾಲೆ ನಿರ್ಮಿಸಲು ಕ್ರಮ ವಹಿಸಲಾಗುವುದು’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಭರವಸೆ ನೀಡಿದರು.

ತಾಲ್ಲೂಕಿನ ಮಾಯಗಾನಹಳ್ಳಿ ಗ್ರಾಮ ಪಂಚಾಯಿತಿಯ ಸಭಾಭವನದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಪಂಚಾಯಿತಿ ಕಟ್ಟಡದ ಮೇಲಂತಸ್ತಿನಲ್ಲಿ ₹30 ಲಕ್ಷ ವೆಚ್ಚದಲ್ಲಿ ಸುಸಜ್ಜಿತವಾಗಿ ಸಭಾ ಭವನ ನಿರ್ಮಾಣ ಮಾಡಲಾಗಿದೆ’ ಎಂದರು.

ADVERTISEMENT

‘ಪಂಚಾಯಿತಿ ಸದಸ್ಯರಾಗುವುದು ಮುಖ್ಯವಲ್ಲ. ಬದಲಿಗೆ, ಜನ ಮೆಚ್ಚುವ ಕೆಲಸಗಳನ್ನು ಮಾಡಬೇಕು. ಆಗ ಮಾತ್ರ ಯಾವುದೇ ಹುದ್ದೆ ಅಥವಾ ಸ್ಥಾನಮಾನಕ್ಕೆ ಗೌರವ ಸಿಗುತ್ತದೆ’ ಎಂದು ಹೇಳಿದರು.

‘ಗ್ರಾಮಕ್ಕೆ ಕರ್ನಾಟಕ ಪಬ್ಲಿಕ್ ಹೈಟೆಕ್ ಶಾಲೆ ಅವಶ್ಯಕತೆಯಿದೆ. ಸ್ಪರ್ಧಾತ್ಮಕ ಯುಗಕ್ಕೆ ಮಕ್ಕಳನ್ನು ಸಿದ್ದಗೊಳಿಸಲು ಸಾಧ್ಯವಾಗುತ್ತದೆ’ ಎಂದು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಚ್. ರಂಜಿತ್ ಅವರು ಶಾಸಕರಿಗೆ ಮನವಿ ಮಾಡಿದರು‌.

ಪಿಡಿಒ ಡಿ.ಎಲ್. ಮಾದೇಗೌಡ, ‘ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದು, ಶೇ 80ರಷ್ಟುಇ-ಖಾತಾ ಆಗಿದೆ. 4 ಉಪ ಗ್ರಾಮಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಸ್ಮಶಾನ ಅಭಿವೃದ್ಧಿಗೆ ಕ್ರಮ‌ ವಹಿಸಲಾಗಿದೆ’ ಎಂದು ಅಭಿವೃದ್ಧಿ ಕುರಿತು ಮಾಹಿತಿ ನೀಡಿದರು.

ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್ ಕುಮಾರ್, ಬಗರ್ ಹುಕುಂ ಸಮಿತಿ ಸದಸ್ಯ ರವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪರಮಶಿವಯ್ಯ, ಸದಸ್ಯರಾದ ಪ್ರಕಾಶ್, ನಾಗರಾಜು, ರಾಜಶೇಖರ್, ವೆಂಕಟೇಶ್, ಶ್ರೀನಿವಾಸ್, ಮಾಯಮ್ಮ, ಶೋಭಾ, ಕೆಂಪರಾಜಮ್ಮ, ಕಾಂಗ್ರೆಸ್ ಮುಖಂಡ ಗುರುಪ್ರಸಾದ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.