ADVERTISEMENT

ಕೆಎಸ್‌ಒಯು: ಪ್ರವೇಶಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 29 ಮೇ 2019, 14:29 IST
Last Updated 29 ಮೇ 2019, 14:29 IST

ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2019-–20ನೇ ಶೈಕ್ಷಣಿಕ ಸಾಲಿಗೆ ವಿವಿಧ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಲಿಬ್.ಐ.ಎಸ್‍ ಸ್ಸಿ, ಎಂ.ಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಎಂ.ಕಾಂ, ಎಂ.ಲಿಬ್.ಐ.ಎಸ್‍ ಸ್ಸಿ, ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ.ಡಿಪ್ಲೊಮಾ, ಡಿಪ್ಲೊಮಾ ಮತ್ತು ಸರ್ಟಿಫಿಕೆಟ್‌ ಕೋರ್ಸುಗಳ ಪ್ರವೇಶಕ್ಕೆ ಅವಕಾಶವಿದೆ.

ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಪ್ರವೇಶ ಪ್ರಕ್ರಿಯೆ ಶುಲ್ಕ ₨300, ಕೌಶಲಾಭಿವೃದ್ಧಿ ತರಬೇತಿ ಶುಲ್ಕ ₨500 ಮಾತ್ರ ಪಾವತಿಸಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ಶೇ 25 ರಷ್ಟು ವಿನಾಯಿತಿ ಇದೆ.

ADVERTISEMENT

ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಇಲ್ಲವೇ ಅಂಕಪಟ್ಟಿ, ಇತರೆ ಅಗತ್ಯ ದಾಖಲಾತಿಗಳೊಂದಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ರಾಮನಗರ ಪ್ರಾದೇಶಿಕ ಕೇಂದ್ರದಲ್ಲಿ ಸಲ್ಲಿಸಬಹುದು. ಪ್ರವೇಶ ಪಡೆಯ ಬಯಸುವವರಿಗೆ ಸ್ಥಳದಲ್ಲಿಯೇ ಅರ್ಜಿ ತುಂಬಿ, ಅಂದೇ ಸಿದ್ಧಪಾಠ ಹಾಗೂ ಗುರುತಿನಚೀಟಿಯನ್ನು ವಿತರಿಸಲಾಗುವುದು ಎಂದು ಪ್ರಾದೇಶಿಕ ನಿರ್ದೇಶಕ ಡಾ. ವಿಜಯ್‌ ಪ್ರಕಾಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗಾಗಿ ನಗರದ ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಅಥವಾ ದೂ.ಸಂ. 080–-27274443, 9986458055, 8618501602, 8861732487 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.