ADVERTISEMENT

ಯಡಿಯೂರಪ್ಪ ರಾಜೀನಾಮೆ ವಿಚಾರದಲ್ಲಿ ಮಠಾಧೀಶರ ಮಧ್ಯಪ್ರವೇಶ ಹೊಸ ಬೆಳವಣಿಗೆ: ಎಚ್‌ಡಿಕ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 14:37 IST
Last Updated 22 ಜುಲೈ 2021, 14:37 IST
   

ರಾಮನಗರ: ಕೆಲವು ಸ್ವಾಮೀಜಿಗಳು ಯಡಿಯೂರಪ್ಪ ಪರವಾಗಿ ಮಾತನಾಡಿರುವುದು ರಾಜಕೀಯವಾಗಿ ಹೊಸ ಬೆಳವಣಿಗೆ. ಈ ಬಗ್ಗೆ ಬಿಜೆಪಿಯವರೇ ನಿರ್ಧರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣದಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಯಡಿಯೂರಪ್ಪ ಅವರ ಎರಡು ವರ್ಷದ ಸಾಧನೆ ಬಗ್ಗೆ ಅಂಕ ಕೊಡಲು ನಾನು ಲೆಕ್ಚರರ್‌ ಅಲ್ಲ. ಅವರನ್ನು ಮುಖ್ಯಮಂತ್ರಿಯಾಗಿ ಉಳಿಸಿಕೊಳ್ಳುವ ಇಲ್ಲವೇ ಕೈಬಿಡುವ ಬಗ್ಗೆ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ. ಇದರಲ್ಲಿ ನಮಗೆ ಯಾವ ಲಾಭವೂ ಬೇಡ. ಜೆಡಿಎಸ್‌ ಬೆಂದ ಮನೆಯಲ್ಲಿ ಗಳ ಇರಿಯುವ ಕೆಲಸ ಮಾಡುವುದಿಲ್ಲ. ಮೈತ್ರಿ ಸರ್ಕಾರ ಕೆಡವಿ ಬಂದವರೇ ಈ ಸಂಕಷ್ಟಕ್ಕೆ ಪರಿಹಾರ ನೀಡಬೇಕು. ರಾಜ್ಯದ ಜನರ ಪರ ಕೆಲಸ ಮಾಡಬೇಕು’ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ಸಮುದಾಯದವರ ಆಯ್ಕೆ ವಿಚಾರ ಕುರಿತು ಪ್ರತಿಕ್ರಿಯಿಸಿ ‘ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ಈಚೆಗೆ ರಾಷ್ಟ್ರೀಯ ಪಕ್ಷಗಳಲ್ಲಿ ಸಮುದಾಯಗಳ ಹೆಸರಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನ ನಡೆದಿದೆ. ಈ ಬಗ್ಗೆ ರಾಜ್ಯದ ಜನರೇ ಮುಂದೆ ನಿರ್ಧಾರ ಮಾಡುತ್ತಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.