ಕುಮಾರಸ್ವಾಮಿ ಜನ್ಮದಿನ
ರಾಮನಗರ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ 64ನೇ ಜನ್ಮದಿನವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಿದರು.
ನಗರದ ಬಸ್ ನಿಲ್ದಾಣದಲ್ಲಿ ಬೃಹತ್ ಕೇಕ್ ಕತ್ತರಿಸಿ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಿದರು. ಸಾರ್ವಜನಿಕರಿಗೆ ಸಿಹಿ ಹಂಚಿದರು. ರೈತರಿಗೆ ತೆಂಗಿನ ಸಸಿ, ಮಾವಿನ ಸಸಿ, ಅಡಿಕೆ ಸಸಿ ಹಾಗೂ ಬಡವರಿಗೆ ಬೆಡ್ ಶೀಟ್ ವಿತರಿಸಿದರು.
ಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಬಂದ ಕಾರ್ಯಕರ್ತರು, ತಮ್ಮ ಮೆಚ್ಚಿನ ನಾಯಕನ ಹೆಸರಿನಲ್ಲಿ ವಿಶೇಷ ಪೂಜೆ ಮಾಡಿಸಿದರು. ಆಯಸ್ಸು, ಆರೋಗ್ಯ ಹಾಗೂ ಯಶಸ್ಸು ಸಿಗಲಿ ಎಂದು ಪ್ರಾರ್ಥಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.