ಮಾಗಡಿ: ತಾಲ್ಲೂಕಿನ ಸುಗ್ಗನಹಳ್ಳಿ ಲಕ್ಷ್ಮಿ ನರಸಿಂಹಸ್ವಾಮಿ ದೊಡ್ಡ ಗರುಡೋತ್ಸವ ಬುಧವಾರ ವೈಭವದಿಂದ ನಡೆಯಿತು.
ರಥದ ಮೇಲೆ ದೊಡ್ಡಗರುಡದೇವರ ಕಂಚಿನ ಪುತ್ಥಳಿಯೊಂದಿಗೆ ನರಸಿಂಹಸ್ವಾಮಿ ಮತ್ತು ಉಭಯ ಅಮ್ಮನವರ ಸಹಿತ ಅಲಂಕೃತ ಉತ್ಸವ ಮೂರ್ತಿಗಳನ್ನು ಅಲಂಕರಿಸಲಾಗಿತ್ತು.
ಶಾಸಕ ಎಚ್.ಸಿ.ಬಾಲಕೃಷ್ಣ ಲಕ್ಷ್ಮಿ ನರಸಿಂಹಸ್ವಾಮಿ ಮೂಲ ದೇವರಿಗೆ ಪೂಜೆ ಸಲ್ಲಿಸಿದರು. ನಂತರ ದೊಡ್ಡ ಗರುಡೋತ್ಸವಕ್ಕೆ ಚಾಲನೆ ನೀಡಿದರು.
ಈ ವೇಳೆ ಮುಖಂಡರಾದ ಜಯಶಂಕರ್, ಸಾರಂಗಪಾಣಿ, ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಮಹದೇವಯ್ಯ ಹಾಗೂ ಭಕ್ತಾಧಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.