ADVERTISEMENT

ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್ ವಿತರಣೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 5:46 IST
Last Updated 22 ನವೆಂಬರ್ 2023, 5:46 IST
ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಜೀವಿತಾ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಬಿ.ಕೆ. ಸಂತೋಷ್ ಉಚಿತವಾಗಿ ಲ್ಯಾಪ್ ಟಾಪ್ ನೀಡಿದರು. ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು
ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಜೀವಿತಾ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಬಿ.ಕೆ. ಸಂತೋಷ್ ಉಚಿತವಾಗಿ ಲ್ಯಾಪ್ ಟಾಪ್ ನೀಡಿದರು. ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು   

ಚನ್ನಪಟ್ಟಣ: ತಾಲ್ಲೂಕಿನ ಬೈರಾಪಟ್ಟಣ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿನಿ ಜೀವಿತಾ ಅವರಿಗೆ ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಬಿ.ಕೆ. ಸಂತೋಷ್ ಅವರು ಮಂಗಳವಾರ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಿದರು.

ಖಾಸಗಿ ಹೋಟೆಲ್‌ವೊಂದರಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಬಿ.ಟಿ. ಶಿವಕುಮಾರ್ ಅವರ ಪುತ್ರಿ ಜೀವಿತಾ ಅವರಿಗೆ ಲ್ಯಾಪ್‌ ಟ್ಯಾಪ್ ವಿತರಿಸಿದರು.

ಜೀವಿತಾ ಬಿ.ಇ ವ್ಯಾಸಂಗ ಮಾಡುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲೆಂದು ಬೈರಾಪಟ್ಟಣ ಕಾಂಗ್ರೆಸ್ ಟೀಂ ವತಿಯಿಂದ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದೇ ರೀತಿ ಹಂತ ಹಂತವಾಗಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರ್ತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುವುದು ಎಂದು ಸಂತೋಷ್ ತಿಳಿಸಿದರು.

ADVERTISEMENT

ಕಾಂಗ್ರೆಸ್ ಮುಖಂಡರಾದ ಸಂಕಲಗೆರೆ ಕೃಷ್ಣಪ್ಪ, ಬೆಳಕೆರೆ ಬಿ.ಎಸ್. ಮಂಜು, ಬೈರಾಪಟ್ಟಣ ಗ್ರಾಮದ ಯುವ ಕಾಂಗ್ರೆಸ್ ಮುಖಂಡರಾದ ಮದನ್, ಸಿದ್ದಲಿಂಗೇಗೌಡ, ಸುಮೇದ್, ವೆಂಕಟೇಶ್, ಶರತ್, ಸಿದ್ದರಾಜು ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.