ADVERTISEMENT

ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ: ಲಾಠಿ ಚಾರ್ಜ್

ಚನ್ನಪಟ್ಟಣ| ಕಾರ್ಯಕ್ರಮಕ್ಕೆ ಅಡ್ಡಿ: ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 4:02 IST
Last Updated 2 ಅಕ್ಟೋಬರ್ 2022, 4:02 IST
   

ರಾಮನಗರ: ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದಲ್ಲದೇ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಮುಖ್ಯಮಂತ್ರಿಗಳ 50 ಕೋಟಿ ವಿಶೇಷ ಅನುದಾನದ ಅಡಿ ವಿವಿಧ ಕಾಮಗಾರಿಗೆ ಚಾಲನೆ ನೀಡಲು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಶನಿವಾರ ಬೆಳಿಗ್ಗೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಗ್ರಾಮಕ್ಕೆ ಆಗಮಿಸಿದ್ದರು. ಸ್ಥಳೀಯ ಶಾಸಕರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನೇ ದೂರ ಇಟ್ಟು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಯೋಗೇಶ್ವರ್ ಕಾರಿಗೆ ಮುತ್ತಿಗೆ ಹಾಕಿದರು. ಕಲ್ಲು ಹಾಗೂ ಮೊಟ್ಟೆ ಎಸೆದರು. ನೆರೆದಿದ್ದ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

ಪೊಲೀಸ್ ಭದ್ರತೆ ನಡುವೆ ಯೋಗೇಶ್ವರ್ ಕಾರ್ಯಕ್ರಮ ಮುಗಿಸಿ ಅಲ್ಲಿಂದ ಹೊರಟರು.

ADVERTISEMENT

ಸಚಿವರು ಗೈರು: ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಶನಿವಾರ ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೆ ಬೆಳಿಗ್ಗೆಯಿಂದಲೇ ಪ್ರತಿಭಟನೆ ಜೋರಾಗಿದ್ದು, ಸಚಿವರು ಗೈರಾದರು.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.