ADVERTISEMENT

ಕುರಿಗಾಹಿ ಮೇಲೆ ಚಿರತೆ ದಾಳಿ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 13:22 IST
Last Updated 22 ಡಿಸೆಂಬರ್ 2019, 13:22 IST
ಚಿರತೆ ದಾಳಿಯಿಂದ ಗಾಯಗೊಂಡಿರುವ ನರಸಿಂಹ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು
ಚಿರತೆ ದಾಳಿಯಿಂದ ಗಾಯಗೊಂಡಿರುವ ನರಸಿಂಹ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು   

ರಾಮನಗರ: ಚಿರತೆ ದಾಳಿಯಿಂದಾಗಿ ಕುರಿಗಾಯಿ ಗಾಯಗೊಂಡಿರುವ ಘಟನೆ ಭಾನುವಾರ ಮಧ್ಯಾಹ್ನ ಇಲ್ಲಿನ ಬಸವನಪುರದಲ್ಲಿ ಗ್ರಾಮದಲ್ಲಿ ನಡೆದಿದೆ.

ನರಸಿಂಹ (42) ಗಾಯಗೊಂಡಿರುವ ಕುರಿಗಾಹಿ. ಬಸವನಪುರದ ಗ್ರಾಮದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ, ನರಸಿಂಹ ಮೇಲೆ ಎರಗಿ, ತಲೆ ಭಾಗದಲ್ಲಿ ಪರಚಿ ಗಾಯಗೊಳಿಸಿದೆ. ಘಟನೆಯಿಂದಾಗಿ ಸಣ್ಣಪುಟ್ಟ ತರಚಿರುವ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗಾಯಗೊಂಡ ನರಸಿಂಹ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.