ADVERTISEMENT

ಮಾಗಡಿ: ಮಲ್ಲೂರಿನಲ್ಲಿ ಚಿರತೆ ಸೆರೆ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 2:56 IST
Last Updated 14 ಆಗಸ್ಟ್ 2022, 2:56 IST
ಮಾಗಡಿ ತಾಲ್ಲೂಕಿನ ಮಲ್ಲೂರು ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಗಂಡು ಚಿರತೆ
ಮಾಗಡಿ ತಾಲ್ಲೂಕಿನ ಮಲ್ಲೂರು ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಗಂಡು ಚಿರತೆ   

ಮಾಗಡಿ: ತಾಲ್ಲೂಕಿನ ಮಲ್ಲೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಬಿದ್ದಿದೆ.

ಕುರಿ, ಮೇಕೆ, ದನ, ಕರುಗಳ ಮೇಲೆ ದಾಳಿ ಮಾಡುತ್ತಿತ್ತು. ಹಲವು ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿ ಬೋನು ಇಡಲಾಗಿತ್ತು. ಶನಿವಾರ ಮುಂಜಾನೆ ಚಿರತೆ ಸೆರೆಯಾಗಿದೆ ಎಂದು ವಲಯ ಅರಣ್ಯ ಅಧಿಕಾರಿ ಜಗದೀಶ್‌ ಗೌಡ ತಿಳಿಸಿದರು.

ಸೆರೆಯಾದ ಚಿರತೆಯನ್ನು ಕೊಳ್ಳೇಗಾಲ ಅರಣ್ಯ ಪ್ರದೇಶಕ್ಕೆ ಬಿಡುವುದಾಗಿ ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.