ADVERTISEMENT

ನರಭಕ್ಷಕ ಚಿರತೆ ಸೆರೆಗೆ ನಾಳೆಯಿಂದ ಕಾರ್ಯಾಚರಣೆ: ಅರಣ್ಯ ಸಚಿವ ಆನಂದ ಸಿಂಗ್

​ಪ್ರಜಾವಾಣಿ ವಾರ್ತೆ
Published 9 ಮೇ 2020, 9:44 IST
Last Updated 9 ಮೇ 2020, 9:44 IST
ಅರಣ್ಯ ಸಚಿವ ಆನಂದ ಸಿಂಗ್ ಹಾಗೂ ಸಂಸದ ಡಿ.ಕೆ.ಸುರೇಶ್‌ ಮೃತ ಬಾಲಕ ಹೇಮಂತ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು
ಅರಣ್ಯ ಸಚಿವ ಆನಂದ ಸಿಂಗ್ ಹಾಗೂ ಸಂಸದ ಡಿ.ಕೆ.ಸುರೇಶ್‌ ಮೃತ ಬಾಲಕ ಹೇಮಂತ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು   

ರಾಮನಗರ: ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯದಲ್ಲಿ ಮೂರು ವರ್ಷದ ಬಾಲಕನನ್ನು ಕೊಂದ ಚಿರತೆ ಸೆರೆಗೆ ಭಾನುವಾರದಿಂದಲೇ ಕಾರ್ಯಾಚರಣೆ ಆರಂಭಿಸುವುದಾಗಿ ಅರಣ್ಯ ಸಚಿವ ಆನಂದ ಸಿಂಗ್ ತಿಳಿಸಿದರು.

ಮೃತ ಬಾಲಕ ಹೇಮಂತ್ ಮನೆಗೆ ಭೇಟಿ ನೀಡಿದ ಅವರು ಕುಟುಂಬದವರಿಗೆ ಸಾಂತ್ವನ ಹೇಳಿದರು. ಅಲ್ಲದೆ 7.5 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದರು.

ಇದೊಂದು ದುಃಖದ ಸಂಗತಿ. ವನ್ಯಜೀವಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೂ ಕ್ರಮ ಜರುಗಿಸಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.