ADVERTISEMENT

ಕಡಿಮೆ ಅಂಕ: ಬಾಸುಂಡೆ ಬರುವಂತೆ ವಿದ್ಯಾರ್ಥಿಗಳಿಗೆ ಥಳಿತ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 21:28 IST
Last Updated 15 ಮಾರ್ಚ್ 2021, 21:28 IST

ಕುದೂರು (ಮಾಗಡಿ): ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಖಾಸಗಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮತ್ತು ಶಿಕ್ಷಕರು ಬಾಸುಂಡೆ ಬರುವಂತೆ ಬಾರಿಸಿದ್ದಾರೆ.

ಕಿಶನ್ ಎಂಬ ವಿದ್ಯಾರ್ಥಿ ಮೈಮೇಲಿದ್ದ ಬಾಸುಂಡೆ ಕಂಡು ಅವನ ತಾಯಿ ಬಿಇಒ ಕಚೇರಿ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದಾರೆ. ಮಾ.16ರಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಗುರುಕುಲ ವಿದ್ಯಾಮಂದಿರ ಶಾಲೆಗೆ ಭೇಟಿ ನೀಡಲಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಜೊತೆ ಚರ್ಚಿಸಿದ ನಂತರ ಎಫ್‌ಐಆರ್‌ ದಾಖಲಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸುರೇಂದ್ರ ತಿಳಿಸಿದ್ದಾರೆ.

ADVERTISEMENT

‘ಅಂತಿಮ ಪರೀಕ್ಷೆಯಲ್ಲಿ ಒಳ್ಳೆಯ ಅಂಕ ಗಳಿಸಲಿ ಮತ್ತು ಅವರ ಭವಿಷ್ಯ ಒಳ್ಳೆಯದಾಗಲಿ ಎಂಬ ಸದುದ್ದೇಶದಿಂದ ಹೊಡೆದಿದ್ದು ನಿಜ. ವಿದ್ಯಾರ್ಥಿಗಳು ನಮ್ಮ ಮಕ್ಕಳೇ ಎಂಬ ಭಾವದಿಂದ ಶಿಕ್ಷೆ ನೀಡಿದ್ದೇವೆ. ತಪ್ಪಾಗಿದ್ದರೆ ಪೋಷಕರಲ್ಲಿ ಕ್ಷಮೆಯಾಚಿಸುತ್ತೇವೆ‘ ಎಂದು ಗುರುಕುಲ ವಿದ್ಯಾಮಂದಿರ ಪ್ರೌಢಶಾಲೆಯಮುಖ್ಯ ಶಿಕ್ಷಕ ಕೇಶವ ಮೂರ್ತಿ ವಿಷಾದ ವ್ಯಕ್ತಪಡಿಸಿದ್ದಾರೆ.

ಫೆಬ್ರುವರಿ ಕೊನೆಯ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಗಿತ್ತು. ಮಾರ್ಚ್‌ 9ರಂದು ಫಲಿತಾಂಶ ಪ್ರಕಟವಾಗಿತ್ತು. ಮೂವರು ವಿದ್ಯಾರ್ಥಿಗಳು ಕಡಿಮೆ ಅಂಕ ಪಡೆದ ಕಾರಣ ಸಿಟ್ಟಿಗೆದ್ದ ಶಿಕ್ಷಕರು ಅವರಿಗೆ ಬಾಸುಂಡೆ ಬರುವಂತೆ ಬಾರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.