ಚನ್ನಪಟ್ಟಣ: ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಹಾಗೂ ವಿ.ಸೋಮಣ್ಣ ಅವರು ಜಯಗಳಿಸಿದ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಗುರುವಾರ ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ 101 ಈಡುಗಾಯಿ ಒಡೆದು, ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿ ಹುದ್ದೆ ಅಲಂಕರಿಸಲಿ, ಕುಮಾರಸ್ವಾಮಿ ಅವರಿಗೆ ಕೇಂದ್ರ ಮಂತ್ರಿ ಸ್ಥಾನ ದೊರಕಲಿ ಎಂದು ಪ್ರಾರ್ಥಿಸಿ ದೇವರಿಗೆ ಪೂಜೆ ಸಲ್ಲಿಸಿದರು.
ರಾಂಪುರ ಮಲ್ಲೇಶ್, ರಾಮಕೃಷ್ಣೇಗೌಡ, ಸಿದ್ದಪ್ಪ, ಕೃಷ್ಣಪ್ಪ ಮಂಗಳಾರಪೇಟೆ, ಮರಂಕೇಗೌಡ, ದಾಸಪ್ಪ, ನಾಗೇಶ್ ಗುಬ್ಬಯ್ಯ, ದೊಡ್ಡಮಳೂರು ಕೃಷ್ಣ, ಸಿದ್ದಪ್ಪಾಜಿ, ಸಿ.ಕೆ. ಕೃಷ್ಣ, ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.