
ಪ್ರಜಾವಾಣಿ ವಾರ್ತೆ
ಡಾ. ಸಿ.ಎನ್. ಮಂಜುನಾಥ್ ಅವರು ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿ ಮತಯಾಚಿಸಿದರು.
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ಸೋಮವಾರ ನಗರದಲ್ಲಿರುವ ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿ ಮತ ಯಾಚಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶವು ಅಭಿವೃದ್ಧಿ ದಿಕ್ಕಿನಲ್ಲಿ ಸಾಗುತ್ತಿದೆ. ಎಲ್ಲಾ ಕ್ಷೇತ್ರಗಳಲ್ಲಿ ದೇಶವು ತನ್ನದೇ ಆದ ಛಾಪು ಮೂಡಿಸುತ್ತಿದೆ. ಅಭಿವೃದ್ಧಿ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಮೋದಿ ಅವರ ಕೈ ಬಲಪಡಿಸಬೇಕಾದರೆ ಗ್ರಾಮಾಂತರದಲ್ಲಿ ಬಿಜೆಪಿ ಗೆಲುವು ಸಾಧಿಸಬೇಕು. ಅದಕ್ಕಾಗಿ ವಕೀಲ ಮಿತ್ರರು ನನ್ನನ್ನು ಬೆಂಬಲಿಸಬೇಕು ಎಂದು ಡಾ. ಮಂಜುನಾಥ್ ಮನವಿ ಮಾಡಿದರು.
ವಕೀಲರ ಸಂಘದ ಪದಾಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.