ಸಾವು
ಪ್ರಾತಿನಿಧಿಕ ಚಿತ್ರ
ಹಾರೋಹಳ್ಳಿ: ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಜಿನಿಯರ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಯಾನಂದ ಸಾಗರ್ ಕಾಲೇಜು ಬಳಿ ನಡೆದಿದೆ.
ಕೋಲಾರ ಜಿಲ್ಲೆ ಬೇತಮಂಗಲ ಗ್ರಾಮದ ಹರ್ಷಿತ್ (19), ನೆಲಮಂಗಲದ ದರ್ಶನ್ (19) ಮೃತರು. ಹಾರೋಹಳ್ಳಿ ಬಳಿಯ ದಯಾನಂದ ಸಾಗರ್ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರ್ ವಿದ್ಯಾಭ್ಯಾಸ ಮಾಡುತ್ತಿದ್ದರು.
ಸೋಮವಾರ ಸಂಜೆ ಹರ್ಷಿತ್ ತನ್ನಿಬ್ಬರ ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಹೋಗುತ್ತಿದ್ದಾಗ ತಾಮಸಂದ್ರ ಬೈಪಾಸ್ ಜಂಕ್ಷನ್‌ನಲ್ಲಿ ಬೆಂಗಳೂರು ಕಡೆಯಿಂದ ಕನಕಪುರ ಕಡೆಗೆ ಬರುತ್ತಿದ್ದ ಲಾರಿಗೆ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹರ್ಷಿತ್ ಮತ್ತು ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿಯಲ್ಲಿ ಕುಳಿತಿದ್ದ ಗವಿ ಸಿದ್ದೇಶ (19) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾರೋಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.