
ಪ್ರಜಾವಾಣಿ ವಾರ್ತೆ
ಕನಕಪುರ: ತಾಲ್ಲೂಕು ಕಚೇರಿ ತಹಶೀಲ್ದಾರ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ ಭಾನುವಾರ ಸರಳವಾಗಿ ನಡೆಯಿತು.
ತಾಲ್ಲೂಕು ಕಚೇರಿ ಶಿರಸ್ತೇದಾರ್ ರಘು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಹಿತಿ ಕೂಗಿ ಗಿರಿಯಪ್ಪ ಮಡಿವಾಳ ಮಾಚಿದೇವರ ಕುರಿತು ಮಾತನಾಡಿದರು.
ಮಡಿವಾಳ ಸಮುದಾಯದ ಮುಖಂಡರಾದ ಗುಣಗನಹಳ್ಳಿ ಬೈರಣ್ಣ, ಕುಮಾರ್ ಹಾಗೂ ತಾಲ್ಲೂಕು ಕಚೇರಿ ನೌಕರರು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.