ಕುದೂರು: ರಾಷ್ಟ್ರೀಯ ಹೆದ್ದಾರಿ-75ರ ತಾಳೇಕೆರೆ ಹ್ಯಾಂಡ್ ಪೋಸ್ಟ್ ಬಳಿ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದಾರೆ.
ತಿಪ್ಪಸಂದ್ರ ಹೋಬಳಿ ಹೊಸಹಳ್ಳಿಪಾಳ್ಯ ಗ್ರಾಮದ ಚಿಕ್ಕಣ್ಣ (58) ಮೃತರು.
ಅಪರಿಚಿತ ವಾಹನ ಡಿಕ್ಕಿಯಾದ ಬಳಿಕ ಹಲವು ವಾಹನಗಳು ಇವರ ಮೇಲೆ ಹರಿದು ಹೋದ ಪರಿಣಾಮ ದೇಹ ಸಂಪೂರ್ಣ ಜಜ್ಜಿಹೋಗಿದ್ದು, ದೇಹದ ಹಲವು ಭಾಗಗಳು ಹೆದ್ದಾರಿಯ 100 ಮೀಟರ್ ದೂರದವರೆಗೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.