
ಮಾಗಡಿ: ಜಿಲ್ಲೆಯಾದ್ಯಂತ ಕಂದಾಯ ಗ್ರಾಮಗಳ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೂ ನಿವೇಶನ ನೀಡುವಂತೆ ಮುಖ್ಯಮಂತ್ರಿ ಮತ್ತು ವಸತಿ ಸಚಿವರ ಬಳಿ ಮನವಿ ಮಾಡಲಾಗುವುದು ಎಂದು ಗ್ರಾಮ ಸಹಾಯಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಿಂಗರಾಜು ಹೇಳಿದರು.
ತಾಲ್ಲೂಕಿನ ಸಾವನದುರ್ಗ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.
ಕಂದಾಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ನಿವೇಶನ ನೀಡಲು ಕ್ರಮ ವಹಿಸುತ್ತಿದ್ದು ಗ್ರಾಮ ಸಹಾಕರಿಗೂ ನಿವೇಶನ ನೀಡುವಂತೆ ಗ್ರಾಮ ಸಹಾಯಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಸತಿ ಸಚಿವ ಜಮೀರ್ ಖಾನ್ ಅವರಿಗೆ ಮನವಿ ಮಾಡಲಾಗುತ್ತದೆ. ಕಂದಾಯ ಗ್ರಾಮಗಳಲ್ಲಿ ಗ್ರಾಮ ಸಹಾಯಕರಾಗಿ ಕಾರ್ಯನಿರ್ವಹಿಸುವಾಗ ಅನೇಕ ತೊಡಕುಗಳು ಉಂಟಗುತ್ತವೆ. ಸಂಘಟಿತರಾಗಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದರು.
ಕಸಬ ಹೋಬಳಿ ಕಂದಾಯ ನಿರೀಕ್ಷ ನಟರಾಜ್ ಮಧು ಮಾತನಾಡಿ, ಗ್ರಾಮ ಸಹಾಯಕರು ಹಲವು ವರ್ಷಗಳಿಂದ ಖಾಯಂ ನೌಕರರನ್ನಾಗಿ ಪರಿಗಣಿಸುವಂತೆ ಹೋರಾಟಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಸರ್ಕಾರ ಕಂದಾಯ ಇಲಾಖೆಯಲ್ಲಿ ಅರೆಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ‘ಗ್ರೂಪ್– ಡಿ’ ಸೇರಿಸಿ ಖಾಯಂಗೊಳಿಸುವಂತೆ ಆದೇಶ ಹೊರಡಿಸಿದ್ದು, ಅದರಂತೆ ಗ್ರಾಮ ಸಹಾಯಕರು ತಮ್ಮ ಬೇಡಿಕೆಯನ್ನು ಕಂದಾಯ ಇಲಾಖೆ ನೌಕರರ ಸಂಘಕ್ಕೆ ಇಟ್ಟಿದ್ದು ಕಂದಾಯ ಇಲಾಖೆ ನೌಕರರ ಸಂಘ ಈ ಬಗ್ಗೆ ಸಚಿವರ ಬಳಿ ಚರ್ಚಿಸಿ ಅವರನ್ನು ಖಾಯಂಗೊಳಿಸಿಲು ಕ್ರಮವಹಿಸುವುದಾಗಿ ಭರವಸೆ ನೀಡಿದರು.
ಗೌರವಾಧ್ಯಕ್ಷ ಚಿಕ್ಕರಾಜು, ಉಪಾಧ್ಯಕ್ಷ ವೆಂಕಟೇಶ್, ಪ್ರಭು, ಪ್ರಧಾನ ಕಾರ್ಯದರ್ಶಿ ಗಂಗಾಧರ್, ಖಜಾಂಚಿ ರವಿಕುಮಾರ್, ಪದಾಧಿಕಾರಿಗಳಾದ ನರಸಿಂಹ ಮೂರ್ತಿ, ಉಮೇಶ್, ಚಲುವರಾಜು, ವೆಂಕಟೇಶ್, ರಾಮಲಿಂಗ, ಗಿರೀಶ್, ಕಾಂತರಾಜು, ಶ್ರೀನಿವಾಸ್ ಮೂರ್ತಿ ಸೇರಿದಂತೆ ಜಿಲ್ಲೆಯ ಗ್ರಾಮ ಸಹಾಯಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.