ADVERTISEMENT

ಕಿಯೋಸ್ಕ್: ಹಾಯಧನಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2025, 3:13 IST
Last Updated 4 ಡಿಸೆಂಬರ್ 2025, 3:13 IST
<div class="paragraphs"><p>ಹಣ </p></div>

ಹಣ

   

ರಾಮನಗರ: ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ಮೀನು ಮಾರಾಟ ಕೇಂದ್ರ (ಕಿಯೋಸ್ಕ್-ಪರಿಶಿಷ್ಟ ಜಾತಿ) ಮತ್ತು ಮೀನು ಆಹಾರ ತಯಾರಿಕಾ ಘಟಕ (ದಿನಕ್ಕೆ 2 ಟನ್ ಸಾಮರ್ಥ್ಯ-ಮಹಿಳಾ ವರ್ಗದ) ನಿರ್ಮಾಣಕ್ಕೆ ಸಹಾಯಧನ ನೀಡಲು ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಫಲಾನುಭವಿಗಳಿಗೆ ಪರಿಶಿಷ್ಟ ಜಾತಿ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ 60ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಪಡೆದು ಎಲ್ಲ ಅಗತ್ಯ ದಾಖಲಾತಿಗಳೊಂದಿಗೆ ಡಿ.16ರೊಳಗೆ ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ADVERTISEMENT

ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕ, ರಾಮನಗರ ತಾಲ್ಲೂಕು ಮೊ:9880347733, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಚನ್ನಪಟ್ಟಣ ತಾಲ್ಲೂಕು ಮೊ: 9972127558 ಮತ್ತು ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕನಕಪುರ ತಾಲ್ಲೂಕು ಮೊ:8618277242, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಗಡಿ ತಾಲ್ಲೂಕು ಮೊ: 9880347733 ಹಾಗೂ ಮೀನುಗಾರಿಕೆ ಉಪನಿರ್ದೇಶಕರು, ಬೆಂಗಳೂರು ದಕ್ಷಿಣ ಜಿಲ್ಲೆ ರವರ ಮೊ:9448655014 ಸಂರ್ಪಕಿಸಲು ಕೋರಿದೆ.

-------------------------
ಇಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ರಾಮನಗರ: ಚನ್ನಪಟ್ಟಣ ನಗರಕ್ಕೆ ಕುಡಿಯುವ ನೀರು ಸರಬರಾಜು ನಿರ್ವಹಣೆಯನ್ನು ಮಂಡಳಿ ವತಿಯಿಂದ ಮಾಡಲಾಗುತ್ತಿದೆ. ಟಿ.ಕೆ.ಹಳ್ಳಿಯಿಂದ ಚನ್ನಪಟ್ಟಣದ ಮಾರ್ಗಮಧ್ಯದಲ್ಲಿ ಏರು ಕೊಳವೆ ಮಾರ್ಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆಯನ್ನು ದುರಸ್ತಿ ಮಾಡಲು ತುರ್ತು ಕಾಮಗಾರಿ ಕೈಗೊಳ್ಳಲಾಗಿದೆ.

ಚನ್ನಪಟ್ಟಣ ನಗರಕ್ಕೆ ಡಿ.3ರಂದು ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸಾರ್ವಜನಿಕರು ನಗರಸಭೆ ಮತ್ತು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಚನ್ನಪಟ್ಟಣದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ತಡೆಗಟ್ಟಲು ಅರಿವು 

ರಾಮನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ತಡೆಗಟ್ಟುವ ಕುರಿತು ಕಾನೂನು ಅರಿವು-ನೆರವು ಜಾಗೃತಿ ಕಾರ್ಯಕ್ರಮ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.

ಪ್ರಧಾನ ಜಿಲ್ಲಾ ಹಾಗೂ ಸೆಷನ್ಸ್‌ ನ್ಯಾಯಾಧೀಶ ಅಣ್ಣಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸವಿತಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಜಿನಿ, ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.