ADVERTISEMENT

ಮಾಗಡಿ ಕೋಟೆ ಸರ್ವೆ ಕಾರ್ಯ ಆರಂಭ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 6:35 IST
Last Updated 19 ಜೂನ್ 2025, 6:35 IST
ಮಾಗಡಿಯ ಕೆಂಪೇಗೌಡ ಕೋಟೆ ಮೈದಾನ ಸರ್ವೆ ಕಾರ್ಯ ಆರಂಭವಾಗಿದ್ದು, ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು 
ಮಾಗಡಿಯ ಕೆಂಪೇಗೌಡ ಕೋಟೆ ಮೈದಾನ ಸರ್ವೆ ಕಾರ್ಯ ಆರಂಭವಾಗಿದ್ದು, ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು    

ಮಾಗಡಿ: ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಕೆಂಪೇಗೌಡ ಕೋಟೆ ಸರ್ವೆ ಆರಂಭಿಸಿದ್ದು, ಒತ್ತುವರಿ ಕಾರ್ಯ ತೆರವುಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಗಡಿ-ಬೆಂಗಳೂರು ರಸ್ತೆ ಅಭಿವೃದ್ಧಿ ಹಿನ್ನೆಲೆ ಕೋಟೆ ಪಕ್ಕದ ಕಂದಕ ಮುಚ್ಚಲಾಗುತ್ತಿದೆ ಎಂದು ಕೆಂಪೇಗೌಡ ಅಭಿವೃದ್ಧಿ ಸಮಿತಿ ಅವರ ದೂರಿನ ಅನ್ವಯ ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಕೋಟೆ ಸರ್ವೆ ಮಾಡಲು ತಹಶೀಲ್ದಾರ್, ಪುರಸಭೆ ಮುಖ್ಯಾಧಿಕಾರಿಗೆ ಪತ್ರ ವ್ಯವಹಾರ ನಡೆಸಿದ್ದರು. ಹಾಗಾಗಿ ಬುಧವಾರ  ಕಂದಾಯ ಇಲಾಖೆ ಅಧಿಕಾರಿಗಳು ಕೋಟೆಯ ಸರ್ವೆ ಕಾರ್ಯ ಆರಂಭಿಸಿದ್ದು, ಒಂದು ವಾರದಲ್ಲಿ ಸರ್ವೆ ಮುಗಿಯಲಿದೆ ಎಂದು ತಿಳಿಸಿದ್ದಾರೆ.

ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಉಪನಿರ್ದೇಶಕಿ ಕಾವ್ಯಶ್ರೀ ಮಾತನಾಡಿ, ಕೆಂಪೇಗೌಡರ ಕೋಟೆ ಒತ್ತುವರಿಯಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಗೆ ಪತ್ರ ವ್ಯವಹಾರ ನಡೆಸಿ ಈಗ 13 ಎಕರೆ ಕೋಟೆ ಜಾಗವನ್ನು ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಮಾಗಡಿ ಕೋಟೆ ಸುರಕ್ಷಿತ ಪ್ರದೇಶ ಎಂದು ಗುರುತಿಸಲಾಗಿದ್ದು, ಕೋಟೆ ಸುತ್ತಲು 100 ಮೀಟರ್ ನಿಷೇಧಿತ ಪ್ರದೇಶ ಎಂದು ಗುರುತಿಸಲಾಗಿದೆ. ಸರ್ವೆ ಕಾರ್ಯ ನಡೆದ ನಂತರ ಒತ್ತುವರಿ ತೆರವಿಗೆ ಯಾವ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಕೋಟೆ ಕಂದಕ ಮುಚ್ಚಲು ಅವಕಾಶ ಕೊಡುವುದಿಲ್ಲ ಎಂದರು.

ADVERTISEMENT

ಈ ವೇಳೆ ಕಂದಾಯ ಇಲಾಖೆಯ ಸರ್ವೆ ಅಧಿಕಾರಿಗಳು, ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯ ಸಿಬ್ಬಂದಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.