
ಪ್ರಜಾವಾಣಿ ವಾರ್ತೆ
ಮಾಗಡಿ: ಮಾಗಡಿ-ಕುಣಿಗಲ್ ಮುಖ್ಯ ರಸ್ತೆಯಲ್ಲಿ ನಿಂತಿದ್ದ ಟೆಂಪೊಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದೆ.
ತಾಲ್ಲೂಕಿನ ಪಾಪಿರಂಗಯ್ಯನ ಪಾಳ್ಯದ ಉಪೇಂದ್ರ (23) ಮೃತ ಬೈಕ್ ಸವಾರ. ಜಾಣಗೆರೆ ಪವನ್ ಹಾಗೂ ಚಂದೂರಾಯನಹಳ್ಳಿಯ ಸಾಗರ್ ಅವರಿಗೆ ಗಂಭೀರವಾಗಿ ಗಾಯವಾಗಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಬುಧವಾರ ಬೆಳಗ್ಗೆ ಮಾಗಡಿ ಕಡೆಯಿಂದ ಕುಣಿಗಲ್ ರಸ್ತೆ ಮಾರ್ಗವಾಗಿ ಗ್ರಾಮಕ್ಕೆ ತೆರಳುವ ವೇಳೆ ಚಂದೂರಾಯನಹಳ್ಳಿ ಸಮೀಪ ರಸ್ತೆ ಬದಿಯಲ್ಲಿ ನಿಂತಿದ್ದ ಟೆಂಪೊಗೆ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.