ಮಾಗಡಿಯ ಸರ್ಕಾರಿ ಆಸ್ಪತ್ರೆಗೆ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಶುಕ್ರವಾರ (ಜ.2) ನಸುಕಿನಲ್ಲಿ ಭೇಟಿ ನೀಡಿದರು
ಮಾಗಡಿ: ಪಟ್ಟಣದಲ್ಲಿರುವ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಶುಕ್ರವಾರ ನಸುಕಿನ 4.30ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಗೈರಾಗದೆ ಸರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಬಾಲಕೃಷ್ಣ ಖುದ್ದು ಪರಿಶೀಲಿಸಿದರು.
ಬಳಿಕ ವಾರ್ಡ್‌ಗಳಲ್ಲಿದ್ದ ರೋಗಿಗಳು ಹಾಗೂ ಆಗಷ್ಟೇ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ಬಂದಿದ್ದ ಕೆಲ ರೋಗಿಗಳನ್ನು ಮಾತನಾಡಿಸಿದರು. ಆಸ್ಪತ್ರೆಯಲ್ಲಿ ಸರಿಯಾಗಿ ಚಿಕಿತ್ಸೆ ಮತ್ತು ಔಷಧ ಸಿಗುತ್ತಿದೆಯೇ? ಸಿಬ್ಬಂದಿ ಸೂಕ್ತವಾಗಿ ಸ್ಪಂದಿಸುತ್ತಾರೆಯೇ ಎಂಬುದರ ಮಾಹಿತಿ ಪಡೆದರು.
ಆಸ್ಪತ್ರೆ ನಿರ್ವಹಣೆ ಕುರಿತು ವೈದ್ಯರಿಂದ ಮಾಹಿತಿ ಪಡೆದ ಶಾಸಕರು, ವಾರ್ಡ್‌ಗಳಲ್ಲಿ ಸ್ವಚ್ಛತೆ ಜೊತೆಗೆ ರೋಗಿಗಳಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.